ಅಂಬಿಕಾ ವಿದ್ಯಾಲಯದಲ್ಲಿ ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ
ಪುತ್ತೂರು: ಉತ್ಕøಷ್ಟ ಕಲಾವಿದರು ರೂಪುಗೊಳ್ಳಬೇಕಾದರೆ ವೇದಿಕೆಗಳು ನಿರಂತರವಾಗಿ ಲಭ್ಯವಾಗಬೇಕು. ಎಳೆಯ ವಯಸ್ಸಿನಿಂದಲೇ ಸರಿಯಾದ ಅವಕಾಶಗಳು ದೊರಕುತ್ತಾ ಸಾಗಿದಲ್ಲಿ ಪ್ರತಿಭೆ ಬೆಳಗುತ್ತಾ ಸಾಗುವುದಕ್ಕೆ ಸಾಧ್ಯ. ಶಿಕ್ಷಣ ಸಂಸ್ಥೆಗಳು ಕರ್ತವ್ಯಪ್ರಜ್ಞೆಯಿಂದ ವೇದಿಕೆಗಳನ್ನು ಕಲ್ಪಿಸಿಕೊಡುವ ಕಾರ್ಯಗಳನ್ನು ಮಾಡಬೇಕಿದೆ. ಹಾಗಾದಾಗ ಮಕ್ಕಳಲ್ಲಿ ಹುದುಗಿರಬಹುದಾದ ಅವೆಷ್ಟೋ ಸಾಂಸ್ಕøತಿಕ ಸಂಗತಿಗಳು ಅನಾವರಣಗೊಳ್ಳಬಹುದು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ದಶಮಾನೋತ್ಸವ ಆಚರಣೆ- ದಶಾಂಬಿಕಾ ಪ್ರಯುಕ್ತ ಮೂರು ದಿನಗಳ ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಿಕ್ಷಣ ಜೀವನವನ್ನು ನೀಡುವುದು ಹೌದಾದರೂ ವ್ಯಕ್ತಿಯೊಳಗಿನ ಪ್ರತಿಭೆ ವ್ಯಕ್ತಿತ್ವವನ್ನು ರೂಪಿಸುತ್ತದೆ. ನಮ್ಮ ಮಕ್ಕಳನ್ನು ಸರ್ವತೋಮುಖವಾಗಿ ತಯಾರು ಮಾಡುವಲ್ಲಿ ದೊರಕುವ ವೇದಿಕೆಗಳ ಸದ್ಬಳಕೆ ಅತ್ಯಂತ ಮುಖ್ಯ. ಲಲಿತ ಕಲೆಗಳ ಮೂಲಕ ದೇವಿಯನ್ನು ಸಂತೃಪ್ತಿಪಡಿಸುವ ಕಾರ್ಯ ನಡೆಯುವುದು ಶ್ಲಾಘನಾರ್ಹ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಪುತ್ತೂರು ದಸರಾದ ರೂವಾರಿ ವಾಟೆಡ್ಕ ಕೃಷ್ಣ ಭಟ್ ಮಾತನಾಡಿ, ನವರಾತ್ರಿಯ ಸಂಭ್ರಮದಲ್ಲಿ ಅತ್ಯುತ್ತಮ ಅವಕಾಶ ಎಳೆಯ ಮಕ್ಕಳಿಗೆ ಒದಗಿಬಂದಿದೆ. ಅದನ್ನು ಸದ್ವಿನಿಯೋಗ ಮಾಡಿಕೊಂಡು ಮುನ್ನಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಉಪಸ್ಥಿತರಿದ್ದರು. ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಹತ್ತನೆಯ ತರಗತಿ ವಿದ್ಯಾರ್ಥಿ ಶ್ರೀಕೃಷ್ಣ ಎಸ್.ನಟ್ಟೋಜ ಕಾರ್ಯಕ್ರಮ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ಬಳಿಕ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ಸಾಂಸ್ಕøತಿಕ ಕಾರ್ಯಕ್ರಮದ ಕೊನೆಯಲ್ಲಿ ಶ್ರೀ ಲಲಿತಾಂಬಿಕಾ ದೇವಿಗೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ಮಾಡಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ