ಪಣಜಿ: ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋರಾಟ ನಡೆಸಿ ನಮಗೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು. ಅವರ ಹೋರಾಟದ ಬದುಕು ನಮಗೆಲ್ಲ ಸ್ಪೂರ್ತಿಯಾಗಲಿ. ಗೋವಾದಲ್ಲಿ ನೆಲೆಸಿರುವ ಕನ್ನಡಿಗರ ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಡುವಲ್ಲಿಯೂ ಕೂಡ ನಾವೆಲ್ಲ ಒಗ್ಗಟ್ಟಾಗಿ ಹೋರಾಟ ನಡೆಸುವ ಅಗತ್ಯವಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣಕುಮಾರ ಶೆಟ್ಟಿ ಬಣದ ಗೋವಾ ರಾಜ್ಯಾಧ್ಯಕ್ಷ ಮಂಜು ನಾಟೀಕರ್ ನುಡಿದರು.
ಗೋವಾದ ವಾಸ್ಕೊ ದುಂಡೇಶ್ವರ ಮಠದಲ್ಲಿ ಗಾಂಧೀಜಯಂತಿಯ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣಕುಮಾರ್ ಶೆಟ್ಟಿ ಬಣ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು.
ಮಹಾತ್ಮಾ ಗಾಂಧಿಜಿಯವರು ಅತ್ಯಂತ ಸರಳ ಜೀವನ ನಡೆಸಿದವರು. ಅವರು ಅಹಿಂಸಾ ಮಾರ್ಗದ ಮೂಲಕ ಹೋರಾಟದಿಂದಲೇ ದೇಶದಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು. ಇಂತಹ ಮಹಾತ್ಮರ ಜೀವನ ನಮಗೆ ದಾರಿದೀಪ. ಗೋವಾದಲ್ಲಿ ಕನ್ನಡಿಗರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಸಂಕಷ್ಟದಲ್ಲಿರುವ ಕನ್ನಡಿಗರೊಂದಿಗೆ ಸದಾ ಇರಲಿದೆ. ಮುಂಬರುವ ದಿನಗಳಲ್ಲಿಯೂ ಕರ್ನಾಟಕ ರಕ್ಷಣಾ ವೇದಿಕೆಯ ಸೇವಾ ಕಾರ್ಯ ಗೋವಾದಲ್ಲಿ ಇದೇ ರೀತಿ ಮುಂದುವರೆಯಲಿದೆ. ನಮ್ಮೊಂದಿಗೆ ಎಲ್ಲ ಕನ್ನಡಿಗರೂ ಕೈಜೋಡಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಗೋವಾ ರಾಜ್ಯಾಧ್ಯಕ್ಷ ಮಂಜು ನಾಟೀಕರ್ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಅಖಿಲ ಗೋವಾ ವೀರಶೈವ ಲಿಂಗಾಯತ ಸಮಾಜದ ರುದ್ರಯ್ಯ ಹಿರೇಮಠ ಮಾತನಾಡಿ- ಮಹಾತ್ಮರ ಹೋರಾಟದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿದೆ. ನಾವು ಯಾವ ರೀತಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತೇವೆಯೋ ಅದೇ ರೀತಿ ಇಂದು ನಾವು ಗಾಂಧೀಜಿಯವರ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ದುರ್ಗಾದೇಸಿ ಸಮೀತಿ ಬಿರ್ಲಾ ಅಧ್ಯಕ್ಷ ಬಸವರಾಜ ಗೌಡರ್, ರಮೇಶ್ ಗೌಡರ್, ಕರ್ನಾಟಕ ರಕ್ಷಣಾ ವೇದಿಕೆಯ ಗೋವಾ ರಾಜ್ಯ ಕಾರ್ಯದರ್ಶಿ ಶಿವಾನಂದ ಮನಬಿನಾಳ, ಉಪಾಧ್ಯಕ್ಷ ಮಹಾಂತೇಶ ಕಾರಗೇರಿ, ರಾಜ್ಯ ಸಂಚಾಲಕ ವೈ.ಎಸ್.ಬಿರಾದಾರ್, ಯುವ ಮೋರ್ಚಾ ಅಧ್ಯಕ್ಷ ಯಶವಂತ್ ಕಿಂಗ್, ಉಪಾಧ್ಯಕ್ಷ ಮೌನೇಶ್ ಛಲವಾದಿ, ಮಾಧ್ಯಮ ಸಂಚಾಲಕ ರಮೇಶ್ ಮಾದರ್, ಸಹ ಕಾರ್ಯದರ್ಶಿ ಚಂದ್ರಶೇಖರ್ ವಾಲ್ಮೀಕಿ, ಇತರ ಸಂಘಟನೆಗಳ ಮುಖಂಡರಾದ- ಶಿವು ಛಲವಾದಿ, ಸಂಗಮೇಶ ಹಗರಿ, ರಕ್ಷಣಾ ವೇದಿಕೆಯ ಮಹಿಳಾ ಮೋರ್ಚಾ ಮುಖಂಡರಾದ ಪಾರ್ವತಿ ಛಲವಾದಿ, ಭಾಗ್ಯಶ್ರೀ ನಾಯಕ, ಸುಮಿತ್ರಾ ಶೆಟ್ಟಿ ಸೇರಿದಂತೆ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


