ಜೀವನದಲ್ಲಿ ಪರಿಶ್ರಮ ಇದ್ದಾಗ ಮಾತ್ರ ಗುರಿ ತಲುಪಲು ಸಾಧ್ಯ: ಡಾ.ಪಾರ್ವತಿ ವೇಣು

Upayuktha
0



ಪುತ್ತೂರು: ಸ್ಪರ್ಧಾತ್ಮಕ ಯುಗದಲ್ಲಿ ಪ್ರತೀ ಕ್ಷೇತ್ರದಲ್ಲಿ ವೃತ್ತಿ ಮಾಡಲು ಶ್ರದ್ಧೆ, ಹೊಂದಾಣಿಕೆ, ತಂಡದಲ್ಲಿ ಕಾರ್ಯ ನಿರ್ವಹಿಸುವ ಗುಣ, ಏಕಾಗ್ರತೆಯಂತಹ ಕೌಶಲ್ಯಗಳಲ್ಲಿ ಯುವಜನತೆ ಪರಿಣಿತಿ ಹೊಂದಬೇಕು, ಸಂದರ್ಶನದ ಸಂದರ್ಭದಲ್ಲಿ ನಮ್ಮ ಮಾತು ಎಷ್ಟು ಮುಖ್ಯವೋ, ನಮ್ಮ ಆಂಗಿಕ  ಭಾಷೆಯೂ ಅಷ್ಟೇ ಮುಖ್ಯತೆಯನ್ನ ಪಡೆದುಕೊಳ್ಳುತ್ತದೆ ಎಂದು ಡಾ. ಪಾರ್ವತಿ ವೇಣು ಹೇಳಿದರು.



ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ನಡೆದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ವ್ಯಕ್ತಿತ್ವ ಎಂಬುದು ಅನೇಕ ಶಕ್ತಿಗಳ ಸಂಗಮ. ವಿದ್ಯಾರ್ಥಿ ಜೀವನದಲ್ಲಿ ವೃತ್ತಿ ಬದುಕಿಗೆ ಪೂರಕವಾದ ಯೋಜನೆಗಳನ್ನು ಹಾಕಿಕೊಳ್ಳುವುದರ ಜೊತೆಗೆ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಕಲಿಕೆ ನಾಲ್ಕು ಗೋಡೆಗಳಿಗೆ ಸೀಮಿತವಾಗಿರದೆ ಹೊರಜಗತ್ತಿನ ಅನುಭವಗಳನ್ನು ಪಡೆದುಕೊಳ್ಳಬೇಕು. ಅಂತೆಯೇ ಜೀವನದಲ್ಲಿ ಏನಾದರೂ ಸಾಧಿಸಬೇಕಾದರೆ ಪರಿಶ್ರಮ ಅಗತ್ಯ ಎಂದು ಅಭಿಪ್ರಾಯಪಟ್ಟರು. 



ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ವಿಶೇಷ ಅಧಿಕಾರಿ ಮತ್ತು ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ನಾಯ್ಕ್ ಮಾತನಾಡಿ, ವ್ಯಕ್ತಿ ಅವನ ವ್ಯಕ್ತಿತ್ವದಿಂದ ಗುರುತಿಸಿಕೊಳ್ಳಬೇಕೇ ಹೊರತು ಬಾಹ್ಯಸೌಂದರ್ಯದಿಂದಲ್ಲ, ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜ್ಞಾನವನ್ನ ವೃಧಿಸಿಕೊಂಡು ವಿಜಯಶಾಲಿಯಾಗಬೇಕು. ಅಂತೆಯೇ ಇಂದು ನಮ್ಮ ಮುಂದೆ ವಿಪುಲವಾದ ಅವಕಾಶಗಳಿವೆ, ನಮ್ಮ ಗುರಿಯನ್ನು ತಲುಪಲು ನಮ್ಮಲ್ಲಿ ಅದರ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಮತ್ತು ಪರಿಶ್ರಮ ಅಗತ್ಯ ಎಂದು ಹೇಳಿದರು.



ವೇದಿಕೆಯಲ್ಲಿ ಸ್ನಾತಕೋತ್ತರ ವಿಭಾಗದ ಡೀನ್ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ವಿಜಯ ಸರಸ್ವತಿ ಬಿ, ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕ ಡಾ. ಶ್ರೀಶ ಭಟ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ವಿದ್ಯಾರ್ಥಿಗಳಾದ ಸೌಭಾಗ್ಯ ಸ್ವಾಗತಿಸಿ, ಪೂಜಾ ವಾದಿಸಿದರು. ಪೂಜಾಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top