ಹುನಗುಂದ: ಕರ್ನಾಟಕ ಸರ್ಕಾರ ಕರ್ನಾಟಕ ರಾಜ್ಯ ಏಡ್ಸ್ ಪ್ರವೆನ್ಷನ್ ಸೊಸೈಟಿ ಬೆಂಗಳೂರು, ಬಾಗಲಕೋಟೆ ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ ಬಾಗಲಕೋಟ ಪ್ರಾಥಮಿಕ ಆರೋಗ್ಯ ಕೇಂದ್ರ ಮರೋಳ ಐಸಿಟಿಸಿ ವಿಭಾಗ ಸಾರ್ವಜನಿಕ ಆಸ್ಪತ್ರೆ ಹುನಗುಂದ ಗ್ರಾಮ ಪಂಚಾಯತ್ ಅಮರಾವತಿ ಇವರ ಸಂಯೋಗದಲ್ಲಿ ಗ್ರಾಮ ಪಂಚಾಯತ್ ಸದಸ್ಯರಿಗೆ ಎಚ್ಐವಿ ಏಡ್ಸ್ ಕುರಿತು ಮೂಲ ಮಾಹಿತಿ, ಸಾಮಾಜಿಕ ಸವಲತ್ತುಗಳು, ಎಚ್ಐವಿ ಏಡ್ಸ್ ನಿಯಂತ್ರಣ ಕಾಯ್ದೆ 2017 ಹಾಗೂ ಕಳಂಕ, ತಾರತಮ್ಯ ಕುರಿತು ಅರ್ಧ ದಿನದ ತರಬೇತಿ ನೀಡಲಾಯಿತು.
ಗ್ರಾಮ ಪಂಚಾಯತ ಕಾರ್ಯಾಲಯ ಅಮರಾವತಿಯಲ್ಲಿ ಶನಿವಾರ (ಅ.7) ಗ್ರಾಮ ಪಂಚಾಯತ್ ಸದಸ್ಯರಿಗೆ ಮತ್ತು ಸಿಬ್ಬಂದಿಗೆ ಈ ತರಬೇತಿ ನೀಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಬಸವರಾಜ್ ವಿ ಕಮತರ ಹಾಗೂ ಉಪಾಧ್ಯಕ್ಷೆ ಶ್ರೀಮತಿ ನಾಗರತ್ನ ಆ ಮಾದರ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಸ್ ಬಿ ಚಂದ್ರಗಿರಿ, ಉಳಿದ ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರು ಹಾಜರಿದ್ದರು.
ಕೆ ಹೆಚ್ ಪಿ. ಟಿ ನಾಗರಾಜ್ ವಡ್ಡರ್‌ಕಲ್ ಅವರು ಕಾರ್ಯಕ್ರಮ ನಿರೂಪಣೆ ನಡೆಸಿಕೊಟ್ಟರು. ಸಾರ್ವಜನಿಕ ಆಸ್ಪತ್ರೆ, ಹುಣುಗುಂದದ ಐಸಿಟಿಸಿ ವಿಭಾಗದ ಆಪ್ತ ಸಮಾಲೋಚಕ ಪ್ರವೀಣ್ ಕುಮಾರ್ ಎಸ್. ಚೂರಿಯವರು ಗ್ರಾಮ ಪಂಚಾಯತ್ ಸದಸ್ಯರಿಗೆ ಈ ತರಬೇತಿಯ ಮಾಹಿತಿಯನ್ನು ನೀಡಿದರು. ಕೆ ಹೆಚ್ ಪಿ ಟಿ ಸಿಬ್ಬಂದಿಗಳು ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಗಳು ಹಾಗೂ ಗ್ರಾಮ ಪಂಚಾಯಿತಿಯ ಎಲ್ಲ ಸದಸ್ಯರು ಕಾರ್ಯಕ್ರಮಕ್ಕೆ ಸಹಕರಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ