ಎಸ್.ಡಿ.ಎಂ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ
ಉಜಿರೆ: ಸಂಗ್ರಹಿತ ಅಂಕಿ-ಅಂಶಗಳನ್ನು ತಪ್ಪಾಗಿ ಗ್ರಹಿಸದೇ ನಿಖರ ವಿಶ್ಲೇಷಣೆಗೊಳಪಡಿಸುವ ಸವಾಲು ನಿರ್ವಹಣೆಯಿಂದ ಸಂಖ್ಯಾಶಾಸ್ತ್ರದ ಸಾಧ್ಯತೆಗಳು ವಿಸ್ತರಣೆಗೊಳ್ಳುತ್ತವೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಸಂಖ್ಯಾಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ಟಿ ಪಿ ಎಂ ಪಕ್ಕಳ ಹೇಳಿದರು.
ಅವರು ಉಜಿರೆಯ ಎಸ್. ಡಿ. ಎಂ ಸ್ನಾತಕೋತ್ತರ ಕೇಂದ್ರದ ಸಂಖ್ಯಾಶಾಸ್ತ್ರ ವಿಭಾಗವು ‘ವೃತ್ತಿನಿರ್ವಹಣೆ ಯಲ್ಲಿ ಸಂಖ್ಯಾಶಾಸ್ತ್ರೀಯ ಕೌಶಲ್ಯಗಳ ಮಹತ್ವ’ ಕುರಿತು ಆಯೋಜಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿವಿಧ ಕಂಪನಿಗಳಲ್ಲಿ ಕೆಲಸ ಮಾಡುವ ವೃತ್ತಿಪರರು ಸಂಗ್ರಹಿತ ಅಂಕಿ-ಅಂಶಗಳನ್ನು ಕರಾರುವಕ್ಕಾಗಿ ವಿಶ್ಲೇಷಿಸುವ ಸಾಮರ್ಥ್ಯವುಳ್ಳವರಾಗಬೇಕಾಗುತ್ತದೆ. ಉದ್ಯಮ ವಲಯದ ಮಾರುಕಟ್ಟೆಯಲ್ಲಿ ಗ್ರಾಹಕರ ಮನಸ್ಥಿತಿ ಅರಿಯಲು ಪೂರಕವಾಗುವ ಅಂಕಿ-ಅಂಶಗಳನ್ನು ಪರಿಗಣಿಸಿ ಆಂತರಿಕ-ಬಾಹ್ಯ ಸಮಸ್ಯೆಗಳಿಗೆ ಪರಿಹಾರ ಕಾಣಿಸುವ ವಿಶ್ಲೇಷಣೆ ನಡೆಸುವ ಹಂತದಲ್ಲಿ ಸಂಖ್ಯಾಶಾಸ್ತ್ರಜ್ಞರಿಗೆ ಸವಾಲುಗಳು ಎದುರಾಗುತ್ತವೆ. ಈ ಸವಾಲುಗಳನ್ನು ಸಮರ್ಥವಾಗಿ ನಿರ್ವಹಿಸುವವರು ಪರಿಹಾರದ ದಾರಿಗಳನ್ನು ಕಾಣಿಸಿ ಸಂಖ್ಯಾಶಾಸ್ತ್ರದ ಸಾಧ್ಯತೆಗಳನ್ನು ವಿಸ್ತರಿಸುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಸವಿತಾ ರಾವ್ ಸ್ವಾಗತಿಸಿದರು. ದ್ವಿತೀಯ ಸಂಖ್ಯಾಶಾಸ್ತ್ರ ವಿದ್ಯಾರ್ಥಿನಿ ದೀಪಶ್ರೀ ವಿ ನಿರೂಪಿಸಿ, ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ