ಬೆಂಗಳೂರು: ನಗರದ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ ಮತ್ತು ಹಾಸ್ಪಿಟಲ್‌ನ ವಾರ್ಷಿಕ ಘಟಿಕೋತ್ಸವವು ಶನಿವಾರ, ಅಕ್ಟೋಬರ್ 21ರಂದು ನಿಮ್ಹಾನ್ಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಬೆಂಗಳೂರಿನ ಮಿಂಟೋ ಆಸ್ಪತ್ರೆಯ ನಿರ್ದೇಶಕರೂ ಆಗಿರುವ ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ.ಬಿ.ಎಲ್. ಸುಜಾತಾ ರಾಥೋಡ್ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾಲೇಜು ಅಧ್ಯಕ್ಷ ಕಾಟೂರಿ ಸುಬ್ಬರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಈ ಘಟಿಕೋತ್ಸವದ ವೈಶಿಷ್ಟ್ಯವೆಂದರೆ ಪದವಿ ಪಡೆದ ವಿದ್ಯಾರ್ಥಿಗಳ ಪೋಷಕರು ಈ ಸಂದರ್ಭದಲ್ಲಿ ತಮ್ಮ ಅನುಭವದ ಬಗ್ಗೆ ಮಾತನಾಡಲಿದ್ದಾರೆ. ಕಾರ್ಯಕ್ರಮದ ಮತ್ತೊಂದು ಪ್ರಮುಖ ಅಂಶವೆಂದರೆ ಅಂತಾರಾಷ್ಟ್ರೀಯ ಮ್ಯಾಕ್ಸಿಲೊಫೇಶಿಯಲ್ ಶಸ್ತ್ರಚಿಕಿತ್ಸಕರ ಸಂಘದ ಅಧ್ಯಕ್ಷ ಡಾ. ಸಂಜೀವ್ ನಾಯರ್ ಅವರಿಂದ ವಿದ್ಯಾರ್ಥಿಗಳಲ್ಲಿ ನವಚೇತನ ಮೂಡಿಸಲಿರುವ ಪ್ರೇರಕ ಭಾಷಣ.
ಒಟ್ಟು 61 ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಪದವಿ ಪ್ರದಾನ ಮಾಡಲಾಗುವುದು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ