ವಿವೇಕಾನಂದ ಪ.ಪೂ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟದ ಕಬಡ್ಡಿ ಸ್ಪರ್ಧೆಗೆ ಆಯ್ಕೆ

Upayuktha
0


ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ  ನಡೆದ ಪುತ್ತೂರು ತಾಲೂಕು ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಅನ್ನಪೂರ್ಣ ರೈ ಬೆಸ್ಟ್ ಕ್ಯಾಚರ್ ಹಾಗೂ ಬೆಸ್ಟ್ ಆಲ್ ರೌಂಡರ್ ಆಗಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ತ್ರಿಷಾ ಆಯ್ಕೆಯಾಗಿದ್ದಾರೆ. ತಂಡದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಮನ್ಯ ಎಂ ವಿ, ಅನ್ನಪೂರ್ಣ ರೈ, ವಾಣಿಜ್ಯ ವಿಭಾಗದ ಹೇಮಲತಾ ಕೆ, ವರ್ಷಿತಾ ಎಚ್ ವಿ, ತ್ರಿಷಾ, ಕಾರ್ತಿಕಾ, ಪ್ರಣತಿ,ಹರ್ಷಿತಾ ವಿ ವಿ, ಕಲಾ ವಿಭಾಗದ ಧನುಶ್ರೀ, ಭೂಮಿಕಾ ಭಾಗವಹಿಸಿದ್ದರು.


ಈ ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ರವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top