ಬಂಟ್ವಾಳ: ಬಂಟ್ವಾಳ ತಾಲೂಕಿನ ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ) ಕಲ್ಲಡ್ಕ ಇದರ ವತಿಯಿಂದ 46ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವದ ಉತ್ಸವ ಅಂಗವಾಗಿ ಎಂಆರ್‌ಪಿಎಲ್ ಅಭಿಯಂತರರಾದ ವಿನಯ ಕುಮಾರ್ ಬಲ್ಕಟ್ಟ ಇವರು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಮೂರ್ತಿ ಶ್ರೀಪತಿ ಭಟ್ ಪಲನೀರು ಇವರಿಂದ ಗಣಹೋಮ ಹಾಗೂ ಶ್ರೀ ಶಾರದಾ ಮಾತೆಯ ಪ್ರತಿಷ್ಠೆ ನೆರವೇರಿತು.
ನಂತರ ನಡೆದ ಭಜನಾ ಸಂಕೀರ್ತನೆಯ ದ್ವೀಪ ಪ್ರಜ್ವಲನೆಯನ್ನು ಚೆನ್ನಪ್ಪ ಪೂಜಾರಿ ಗುಂಡಿಮಜಲು, ಮತ್ತು ವಿಶ್ವನಾಥ ದೇವಾಡಿಗ ನೆಟ್ಲ ನೆರವೇರಿಸಿದರು. ನಂತರ ವಿವಿಧ ಬಜನಾ ತಂಡಗಳಿಂದ ಭಜನ ಕಾರ್ಯಕ್ರಮ ಪ್ರಾರಂಭಗೊಂಡಿತು. ಈ ಸಂದರ್ಭದಲ್ಲಿ ಶ್ರೀ ಶಾರದಾ ಪ್ರತಿಷ್ಠಾನದ ಅಧ್ಯಕ್ಷರಾದ ಯತೀನ್ ಕುಮಾರ್ ಪಂಚವಟಿ, ಪ್ರಧಾನ ಕಾರ್ಯದರ್ಶಿ ವಜ್ರನಾಥ ಕಲ್ಲಡ್ಕ, ಉತ್ಸವ ಸಮಿತಿಯ ಅಧ್ಯಕ್ಷರಾದ ಯೋಗೀಶ್ ಗೌರೀಶ್, ಕಾರ್ಯದರ್ಶಿ ಪ್ರಮಿತ್ ಕುಮಾರ್, ಚಿ ರಮೇಶ್, ನರಸಿಂಹ, ನಾಗರಾಜ್ ಬಲ್ಯಾಯ, ರಾಜೇಶ್ ಕೊಟ್ಟಾರಿ ಮತ್ತು ಪ್ರತಿಷ್ಠಾನದ ಸದಸ್ಯರು, ಉತ್ಸವ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ