ಕಾಸರಗೋಡು ಕನ್ನಡ ಗ್ರಾಮದಲ್ಲಿ 18ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ 2023 ನ. 26ಕ್ಕೆ

Upayuktha
0


ಕಾಸರಗೋಡು: ಗಡಿನಾಡಿನಲ್ಲಿ ಪ್ರಪ್ರಥಮವಾಗಿ 18ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ 2023- ಸಾಹಿತ್ಯ ಸಾಂಸ್ಕೃತಿಕ ಉತ್ಸವವನ್ನು ಕಾಸರಗೋಡು ಕನ್ನಡ ಗ್ರಾಮದಲ್ಲಿ 2023 ನವಂಬರ್ 26ರಂದು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಹೃದಯವಾಹಿನಿ ಮಂಗಳೂರು ಇದರ ನೇತೃತ್ವದಲ್ಲಿ ಕರಾವಳಿ ಸಾಂಸ್ಕೃತಿಕ  ಪ್ರತಿಷ್ಠಾನ (ರಿ), ಕನ್ನಡ ಗ್ರಾಮ, ಕಾಸರಗೋಡು ಇದರ ಸಹಯೋಗದಲ್ಲಿ ಒಂದು ದಿನದ 18ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನವನ್ನು ಸಂಘಟಿಸಲಿದ್ದು, ಇದರ ಪೂರ್ವಭಾವಿ ಸಿದ್ಧತೆಗಾಗಿ ಸಮಾಲೋಚನಾ ಸಭೆಯನ್ನು ಕಾಸರಗೋಡು ಕನ್ನಡ ಗ್ರಾಮದಲ್ಲಿ ಇದೇ 2023 ಅಕ್ಟೋಬರ್ 14 ಶನಿವಾರದಂದು ಸಂಜೆ ಗಂಟೆ 4.30ಕ್ಕೆ ಕರೆಯಲಾಗಿದೆ. ಕಾಸರಗೋಡು ಪ್ರದೇಶದ ಎಲ್ಲಾ ಸಂಘ ಸಂಸ್ಥೆಗಳು ಸಾಹಿತಿಗಳು, ಕಲಾವಿದರು, ಅಧ್ಯಾಪಕರು, ಸಂಘಟಕರು ಮಾಧ್ಯಮದವರನ್ನು ಆಮಂತ್ರಿಸಲಾಗಿದೆ.


ಹೃದಯ ವಾಹಿನಿ ಮಂಗಳೂರು ಸಂಘಟನೆಯ ಅಧ್ಯಕ್ಷ ಇಂಜಿನಿಯರ್ ಕೆ ಪಿ ಮಂಜುನಾಥ ಸಾಗರ್ ಹಾಗೂ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಇವರು ಪೂರ್ವಭಾವಿ ಸಿದ್ಧತೆಯ ಕುರಿತು ಸಮಾಲೋಚನೆ ಸಭೆ ನಡೆಸಲಿದ್ದಾರೆ ಎಂದು  ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ  ಶಿವರಾಮ ಕಾಸರಗೋಡು ತಿಳಿಸಿದ್ದಾರೆ.



Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top