ನಿಟ್ಟೆ: 'ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದೂರ್ ಶಾಸ್ತ್ರಿಯಂತಹ ಮಹಾನ್ ನಾಯಕರು ಹಾಕಿ ಕೊಟ್ಟ ಅಹಿಂಸಾ ಮಾರ್ಗ ಹಾಗೂ ಅವರ ಜೀವನ ಶೈಲಿಯು ಇಂದಿನ ಯುವಕರಿಗೆ ಮಾದರಿಯಾಗಬೇಕು' ಎಂದು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಅಭಿಪ್ರಾಯಪಟ್ಟರು.
ಅವರು ನಿಟ್ಟೆ ಸಮೂಹ ವಿದ್ಯಾಸಂಸ್ಥೆಯು ಸೋಮವಾರ (ಅ. 2) ರಂದು ಆಯೋಜಿಸಿದ್ದ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಸಮಾರಂಭ ಹಾಗೂ ಅದರ ಅಂಗವಾಗಿ ಸ್ವಚ್ಛಭಾರತ್ ಅಭಿಯಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅತಿಥಿಗಳಾಗಿ ಆಗಮಿಸಿದ್ದ ನಿಟ್ಟೆ ತಾಂತ್ರಿಕ ಕಾಲೇಜಿನ ಉಪಪ್ರಾಂಶುಪಾಲ ಡಾ.ಐ ರಮೇಶ್ ಮಿತ್ತಂತಾಯ ಮತ್ತು ಎನ್.ಆರ್.ಎ.ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಪ್ರಶಾಂತ್ ಹೊಳ್ಳ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಈ ಕಾರ್ಯಕ್ರಮವನ್ನು ನಿಟ್ಟೆ ತಾಂತ್ರಿಕ ಕಾಲೇಜಿನ ಎನ್.ಎಸ್.ಎಸ್, ಯೂಥ್ ರೆಡ್ ಕ್ರಾಸ್ ಯುನಿಟ್ ನ ಸಹಯೋಗದೊಂದಿಗೆ ಆಚರಿಸಲಾಯಿತು. ಎನ್.ಎಸ್.ಎಸ್ ನ ಪ್ರಾಧ್ಯಾಪಕ ಸಂಯೋಜಕ ಶ್ರೀನಿವಾಸ ನೆಕ್ಕಾರ್ ಹಾಗೂ ಯೂಥ್ ರೆಡ್ ಕ್ರಾಸ್ ಯುನಿಟ್ ನ ಮುಖ್ಯಸ್ಥ ಡಾ. ಜನಾರ್ದನ್ ನಾಯಕ್ ಉಪಸ್ಥಿತರಿದ್ದರು.
ಸಭಾಕಾರ್ಯಕ್ರಮದ ಅನಂತರ ನಿಟ್ಟೆ ತಾಂತ್ರಿಕ ಕಾಲೇಜಿನ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿಟ್ಟೆ ಕಾಲೇಜು ಕ್ಯಾಂಪಸ್ ನ ಸುತ್ತಮುತ್ತ ಹಾಗೂ ಹಾಸ್ಟೆಲ್ ವಿದ್ಯಾರ್ಥಿಗಳು ಹಾಸ್ಟೆಲ್ ಆವರಣದ ಸುತ್ತಮುತ್ತ ಸ್ವಛತಾ ಕಾರ್ಯವನ್ನು ಕೈಗೊಂಡರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ