ಸುರತ್ಕಲ್: ಭೂಮಿ ಕಳೆದುಕೊಂಡ ನೌಕರರಿಗೆ ನ್ಯಾಯಯುತ ವೇತ, ಸೌಲಭ್ಯ ಕೊಡುವುದು ಕಂಪನಿಗಳ ಜವಾಬ್ದಾರಿಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ನುಡಿದರು.
ಏಕರೂಪದ ವೇತನ ಜಾರಿಗೊಳಿಸುವಂತೆ ಒತ್ತಾಯಿಸಿ ಎಂಆರ್‌ಪಿಎಲ್ ಏರೊಮ್ಯಾಟಿಕ್ಸ್ ಕಾಂಪ್ಲೆಕ್ಸ್ ಎಂಪ್ಲಾಯಿಸ್ ಯೂನಿಯನ್ ವತಿಯಿಂದ ನಡೆಯುತ್ತಿರುವ ಎರಡು ದಿನಗಳ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬೃಹತ್ ಕಂಪನಿಗಳು ಬಂದರೆ ಸಹಜವಾಗಿ ಉದ್ಯೋಗ ಸಿಗುವ ಆಕಾಂಕ್ಷೆ ಸಹಜವಾಗಿ ಇರುತ್ತದೆ. ಆದರೆ ಸ್ಥಳೀಯರಿಗೆ ಉದ್ಯೋಗದಲ್ಲಾಗಲಿ, ವೇತನದಲ್ಲಾಗಲಿ ತಾರತಮ್ಯ ಮಾಡಬಾರದು. ಎಂಆರ್‌ಪಿಎಲ್ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಲು ತಾನು ಶಾಸಕ ಉಮಾನಾಥ ಕೊಟ್ಯಾನ್ ಅವರೊಂದಿಗೆ ಜತೆಯಾಗಲಿದ್ದೇನೆ. ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲಾಗುವುದು ಎಂದರು.
ಈಶ್ವರ್ ಕಟೀಲ್, ಸ್ಥಳೀಯ ಮನಪಾ ಸದಸ್ಯೆ ಸರಿತಾ ಶಶಿಧರ್, ಜಯಂತ್ ತೋಕೂರು, ಯೂನಿಯನ್ ಅಧ್ಯಕ್ಷ ಸುಧೀರ್ ಕುಮಾರ್, ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ