ಮಂಗಳೂರು: ಮಂಗಳೂರು ನಗರ ಇನ್ನು ಕೆಲವೇ ದಿನಗಳಲ್ಲಿ ದಸರಾ ಹಬ್ಬದ ಸಂಭ್ರಮದಲ್ಲಿ ತೇಲಲಿದ್ದು ಈ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ರಜೆ ನೀಡಿದ್ದು ಸ್ವಾಗತಾರ್ಹ. ಆದರೆ ಮಂಗಳೂರು ವಿಶ್ವವಿದ್ಯಾನಿಲಯ ಪದವಿ ವಿದ್ಯಾರ್ಥಿಗಳಿಗೆ ಇನ್ನೂ ಸಹ ರಜೆ ಘೋಷಿಸದಿರುವುದು ಹಬ್ಬದ ಸಂಭ್ರಮ ಸವಿಯಲು ಅಡ್ಡಿಯಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದರು.
ಈಗಾಗಲೇ ಮಂಗಳೂರು ದಸರಾ ಹಬ್ಬಕ್ಕೆ ಪೂರಕವಾಗುವಂತೆ ಪದವಿ ವಿದ್ಯಾರ್ಥಿಗಳಿಗೆ ರಜೆ ನೀಡುವ ಬಗ್ಗೆ ಸಂಬಂಧಪಟ್ಟವರಿಗೆ ಒತ್ತಾಯಿಸಲು ಹಲವಾರು ಪೋಷಕರು ನನ್ನ ಬಳಿ ಮನವಿ ಮಾಡಿದ್ದು ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾಡಳಿತ, ಹಾಗೂ ಸರ್ಕಾರಕ್ಕೆ ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ ಎಂದು ತಿಳಿಸಿದರು.
ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ದಸರಾ ಹಬ್ಬದ ರಜೆಯಲ್ಲಿ ಉಂಟಾಗಿದ್ದ ವ್ಯತ್ಯಾಸವನ್ನು ಸರ್ಕಾರದ ಮಟ್ಟದಲ್ಲಿಯೇ ಮಾರ್ಪಾಡುಗೊಳಿಸುವಲ್ಲಿ ಯಶಸ್ವಿಯಾಗಿದ್ದೆ. ಆದರೆ ಪ್ರಸ್ತುತ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು ಹಿಂದೂ ಧಾರ್ಮಿಕ ಶ್ರದ್ದಾ ಭಾವನೆಗಳಿಗೆ ಎಷ್ಟು ಬೆಲೆ ಕೊಡುತ್ತಾರೆ ಎಂಬುದನ್ನು ಗಮನಿಸಿದರೆ ಬೇಸರವಾಗುತ್ತದೆ.
ದಸರಾ ನಾಡಿನ ಅತ್ಯಂತ ಪ್ರಮುಖ ಹಬ್ಬವಾಗಿದ್ದು ಮಂಗಳೂರು ದಸರಾವು ಮೈಸೂರು ನಂತರ ಅತ್ಯಂತ ಜನಾಕರ್ಷಣೆ ಗಳಿಸಿರುವ ಹಬ್ಬವಾಗಿದೆ. ಹೀಗಾಗಿ ನವರಾತ್ರಿಯನ್ನು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಸೇರಿದಂತೆ ಎಲ್ಲರೂ ಸಂಭ್ರಮದಿಂದ ಆಚರಿಸುವಂತಾಗಲು ರಜೆ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ