ಕೆನರಾ ಕಾಲೇಜು -ವಾಣಿಜ್ಯ ಸ್ನಾತಕೋತ್ತರ ಪದವಿ ಓರಿಯೆಂಟೇಷನ್

Chandrashekhara Kulamarva
0


ಮಂಗಳೂರು: ಕೆನರಾ ಕಾಲೇಜಿನ ವಾಣಿಜ್ಯ ಸ್ನಾತಕೋತ್ತರ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಓರಿಯಂಟೇಶನ್ ಕಾರ್ಯಕ್ರಮವು ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನಡೆಯಿತು. ಸಹ್ಯಾದ್ರಿ ಕಾಲೇಜಿನ ಎಂ ಬಿ ಎ ವಿಭಾಗದ ಸಹಪ್ರಾಧ್ಯಾಪಕರಾದ ಶ್ರೀ ಸಮರ್ಥ ಶೆಣೈ ಬಸ್ತಿಕಾರ್ ಅವರು  ಅತಿಥಿಯಾಗಿ ಆಗಮಿಸಿ ದೀಪ ಬೆಳಗಿಸಿ ಉದ್ಘಾಟಿಸಿ, “ವಿದ್ಯಾರ್ಥಿಗಳು ತಮ್ಮ ಬದುಕಿನ ಗುರಿಯನ್ನು ಸಾಧಿಸಬೇಕಾದರೆ ಆತ್ಮವಿಶ್ವಾಸ, ಜ್ಞಾನಿಗಳ ಸಲಹೆ, ಪರಿಶ್ರಮ ಹಾಗೂ ಶ್ರದ್ಧೆಯನ್ನು ಮುಖ್ಯವಾಗಿ ರೂಢಿಸಿಕೊಳ್ಳಬೇಕು” ಎಂದರು.


ಕಾಲೇಜಿನ ಸಂಚಾಲಕರಾದ ಶ್ರೀ ಸಿಎ ಎಂ.ಜಗನ್ನಾಥ ಕಾಮತ್ ಅಧ್ಯಕ್ಷತೆ ವಹಿಸಿದ್ದು ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ, ಇoದಿನಿಂದಲೇ ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಸಿದ್ಧತೆಯನ್ನು ಮಾಡಬೇಕು ಎಂದರು. ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ ಮಾತನಾಡಿ,ವಿದ್ಯಾರ್ಥಿಗಳು ಇಂದಿನಿಂದಲೇ ಸಂಶೋಧನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.


ಸ್ನಾತಕೋತ್ತರ ವಿಭಾಗದ ಸಂಯೋಜಕಿ ಶ್ರೀಮತಿ ಸ್ವಾತಿ ನಾಯಕ್ ವಿದ್ಯಾರ್ಥಿಗಳಿಗೆ ತಮ್ಮ ವಿಭಾಗದ ಬಗ್ಗೆ ಮಾಹಿತಿ ನೀಡಿದರು. ವಿಭಾಗದ ಇತರ ಉಪನ್ಯಾಸಕಿಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕಿ ಶ್ರೀಮತಿ ಮೇಘ ಸ್ವಾಗತಿಸಿ, ಸ್ನೇಹಾ ಪೈ ವಂದಿಸಿದರು. ವಿದ್ಯಾರ್ಥಿನಿ ಅಕ್ಷಯಾ ಪೈ ಕಾರ್ಯಕ್ರಮ ನಿರೂಪಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top