ಮಂಗಳೂರು: ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಗೃಹರಕ್ಷಕರ ಮಕ್ಕಳ ವಿದ್ಯಾಭ್ಯಾಸ ಹಾಗೂ ಗೃಹರಕ್ಷಕರ ಮತ್ತು ಅವರ ಕುಟುಂಬದವರಿಗೆ ವೈದ್ಯಕೀಯ ವೆಚ್ಚ ಸಹಾಯ ಧನವನ್ನು ನೀಡಲಾಗುತ್ತದೆ.
ಮಂಗಳೂರು ಘಟಕದ ಗೃಹರಕ್ಷಕಿ ಸುಲೋಚನಾ ಇವರ ಮಗಳಾದ ಶ್ರೇಯಾ ಎಸ್. ಶೆಟ್ಟಿ ಇವರ ಮೂರನೇ ವರ್ಷದ ಬಿ.ಇ. (ಇಂಜಿನಿಯರಿಂಗ್) ವ್ಯಾಸಂಗಕ್ಕಾಗಿ ರೂ. 12,000/- ಕೇಂದ್ರ ಕಛೇರಿಯಿಂದ ಸಹಾಯ ಧನ ಮಂಜೂರಾಗಿರುತ್ತದೆ. ಈ ನಿಟ್ಟಿನಲ್ಲಿ ದಿನಾಂಕ 12-10-2023ನೇ ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿ, ಮೇರಿಹಿಲ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಸುಲೋಚನಾ ಇವರಿಗೆ ಚೆಕ್ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಗೃಹರಕ್ಷಕರಾದ ದಿವಾಕರ, ಸಂದೇಶ್, ಖತೀಜಮ್ಮ, ಉಷಾ ಎಸ್. ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ