ಕೆ.ಆರ್.ಪೇಟೆ: ತಾಲ್ಲೂಕಿನ ಮಂದಗೆರೆ ಗ್ರಾಮದ ನಿವಾಸಿ ಎಂ.ಕೆ.ಮಂಜು ಅವರು ಮೈಸೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ಡಾ.ಮಂಜಪ್ಪ ಹೊಸಮನಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ಮಂಡಿಸಿದ "An Empirical Analysis of Interrelationship among Macro Economic Variables with Reference to Monetary Policy in India" ಎಂಬ ಅರ್ಥಶಾಸ್ತ್ರ ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾನಿಲಯವು ಪಿ.ಹೆಚ್.ಡಿ. ಪದವಿಗೆ ಅಂಗೀಕರಿಸಿದೆ. ಪಿ.ಹೆಚ್.ಡಿ ಪದವಿ ಪ್ರಮಾಣ ಪತ್ರವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಲ್ಲೋಟ್ ಉಪಸ್ಥಿತಿಯಲ್ಲಿ ನಡೆದ 103ನೇ ಘಟಿಕೋತ್ಸವದಲ್ಲಿ ಕುಲಪತಿಗಳಾದ ಪ್ರೊ.ಎನ್.ಕೆ.ಲೋಕನಾಥ್ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ವಿಶ್ರಾಂತ ನಾಡೋಜ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾದ ಪತ್ರಿಕೋದ್ಯಮಿ ಡಾ.ಕೆ.ಬಿ.ಗಣಪತಿ, ವಿಶ್ರಾಂತ ರಾಜೀವ್ ಗಾಂಧೀ ವಿವಿ ಪ್ರಾಧ್ಯಾಪಕ ಡಾ.ಪಿ.ಎಸ್.ಶಂಕರ್ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ