ಇಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪದವಿ ಪ್ರದಾನ

Chandrashekhara Kulamarva
0




ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 2022-2023ನೇ ಶೈಕ್ಷಣಿಕ ಸಾಲಿನ ಪದವಿಪ್ರದಾನ ಸಮಾರಂಭವು ಅಕ್ಟೋಬರ್ 21 ರಂದು ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ನಡೆಯಲಿದೆ. ಬೆಳಗ್ಗಿನ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧನೆಗೈದ 26 ವಿದ್ಯಾರ್ಥಿಗಳನ್ನು ಚಿನ್ನ ಮತ್ತು ಬೆಳ್ಳಿಯ ಪದಕವನ್ನು ನೀಡುವ ಮೂಲಕ ಗುರುತಿಸುವ ಹಾಗೂ ಎಂ.ಟೆಕ್ ಮತ್ತು ಎಂಸಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡುವ ಸಮಾರಂಭವಿದ್ದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವೈಸ್ ಚಾನ್ಸಲರ್ ಡಾ. ಎಸ್. ವಿದ್ಯಾಶಂಕರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು.


ನಿಟ್ಟೆ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಶ್ರೀ ಎನ್ ವಿನಯ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ಅಪರಾಹ್ನ ಗಂಟೆ 1.30 ರಿಂದ ಬಿ.ಇ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭವು ನಡೆಯಲಿದ್ದು ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಪ್ರೊ-ಚಾನ್ಸಲರ್ ಡಾ. ಶಾಂತರಾಮ್ ಶೆಟ್ಟಿ ಅಧ್ಯಕ್ಷತೆ ವಹಿಸಲಿರುವರು. ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ವೈಸ್-ಚಾನ್ಸಲರ್ ಡಾ. ಎಂ.ಎಸ್. ಮೂಡಿತ್ತಾಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು.


ಪ್ರತೀ ವರ್ಷದಂತೆ ಈ ಕಾರ್ಯಕ್ರಮವನ್ನು ಲೈವ್ ವೆಬ್‌ಕಾಸ್ಟ್ ಮಾಡುವ ಯೋಜನೆಯನ್ನು ಸಂಸ್ಥೆಯು ರೂಪಿಸಿದ್ದು, ಕಾರ್ಯಕ್ರಮದ ಲೈವ್ ವೀಕ್ಷಣೆಗಾಗಿ youtube.com/c/NMAMInstituteofTechnology ಲಿಂಕ್‌ನ್ನು ಉಪಯೋಗಿಸಬಹುದಾಗಿದೆ ಎಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


إرسال تعليق

0 تعليقات
إرسال تعليق (0)
To Top