ಸುರತ್ಕಲ್ : ಉಕ್ಕಿನ ಮನುಷ್ಯ, ಏಕತೆಯ ಹರಿಕಾರ, ಸರದಾರ ವಲ್ಲಭಬಾಯಿ ಪಟೇಲರವರ 148 ನೇ ಜಯಂತಿ ಮತ್ತು ರಾಷ್ಟ್ರೀಯ ಏಕತಾ ದಿನಾಚರಣೆಯನ್ನು ಗೋವಿಂದದಾಸ ಕಾಲೇಜಿನ ಗ್ರಂಥಾಲಯ ಹಾಗೂ ಭಾಷಾ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಆಚರಿಸಲಾಯಿತು.
ಹಿಂದು ವಿದ್ಯಾದಾಯಿನೀ ಸಂಘದ ಅಧ್ಯಕ್ಷ ಜಯಚಂದ್ರ ಹತ್ವಾರ್ ಪುಷ್ಪನಮನ ಸಲ್ಲಿಸಿದರು. ಕಾರ್ಯದರ್ಶಿ ಶ್ರೀರಂಗ ಹೊಸಬೆಟ್ಟು, ಗೋವಿಂದದಾಸ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ರಮೇಶ ಕುಳಾಯಿ, ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ.ಕೃಷ್ಣಮೂರ್ತಿ, ಉಪಪ್ರಾಂಶುಪಾಲ ಪ್ರೊ. ರಮೇಶ ಭಟ್, ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥ ಪ್ರೊ. ಕುಮಾರ ಮಾದರ, ಎಂ.ಕಾಂ. ವಿಭಾಗದ ಮುಖ್ಯಸ್ಥ ಡಾ. ಗಣೇಶ ಆಚಾರ್ಯ, ಗ್ರಂಥಪಾಲಕಿ ಡಾ.ಸುಜಾತಾ ಬಿ, ಗ್ರಂಥಾಲಯದ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಬಾಗವಹಿಸಿದ್ದರು. ಭಾಷಾ ವಿಭಾಗದ ಮುಖ್ಯಸ್ಥೆ ಅಕ್ಷತಾ ಶೆಟ್ಟಿ ಕಾರ್ಯಕ್ರಮನ್ನು ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ