ಪುತ್ತೂರು: ಶಿಕ್ಷಕ ವೃತ್ತಿ ಇತರೆ ವೃತ್ತಿಯನ್ನು ಹುಟ್ಟುಹಾಕಲು ಸಹಾಯ ಮಾಡುತ್ತದೆ. ಶಿಕ್ಷಕರಲ್ಲಿ ತಾಳ್ಮೆ ಬಹಳ ಮುಖ್ಯ. ಕಾಲ ಬದಲಾದಂತೆ ಶಿಕ್ಷಕರಲ್ಲಿ ತಾಳ್ಮೆಯೂ ಕಡಿಮೆಯಾಗುತ್ತಿದೆ. ಇಂದಿನ ಸಮಾಜಕ್ಕೆ ಉತ್ತಮ ಮೌಲ್ಯ ಮತ್ತು ಜ್ಞಾನ ನೀಡುವ ಶಿಕ್ಷಕರ ಅಗತ್ಯವಿದೆ. ವಿದ್ಯಾರ್ಥಿಗಳ ಮನಸ್ಥಿತಿಯ ಬಗ್ಗೆ ಅರಿತು ಅವರ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರು ನೆರವಾಗಬೇಕು ಎಂದು ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಲಕ್ಷ್ಮೀ ಭಟ್ ಹೇಳಿದರು.
ಅವರು ಮಂಗಳವಾರ ನಡೆದ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ ಸ್ವಾಯತ್ತ ಪುತ್ತೂರು, ಭವಿಷ್ ಘಟಕ ಮತ್ತು ಐಕ್ಯೂಎಸಿ ಇದರ ಸಹಯೋಗದಲ್ಲಿ ನಡೆದ ವಿಶೇಷ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ವಿಷ್ಣು ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಶಿಕ್ಷಕರಾಗಲು ಒಬ್ಬ ವ್ಯಕ್ತಿಯಲ್ಲಿ ಮುಖ್ಯವಾಗಿ ಸಂಕ್ಷಿಪ್ತತೆ ಜೊತೆಗೆ ಗುರಿ ಇರಬೇಕು. ಮೊದಲಿಗೆ ನಮ್ಮ ಸಂಸ್ಕೃತಿ, ನೆಲ, ಜಲವನ್ನು ಪ್ರೀತಿ ಗೌರವದಿಂದ ಕಾಣಬೇಕು ಎಂದು ಶಿಕ್ಷಕರ ಅರ್ಹತೆಗಳ ಬಗ್ಗೆ ತಿಳಿಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಭಾರ ಪ್ರಾಂಶುಪಾಲ ನರಸಿಂಹ ಭಟ್ ಮಾತನಾಡಿ, ಉತ್ತಮ ಹವ್ಯಾಸ ಬೆಳೆಸುವುದರಿಂದ ಉತ್ತಮ ಶಿಕ್ಷಕರಾಗಲು ಸಾಧ್ಯ. ಓದುವ, ಬರೆಯುವ ಹವ್ಯಾಸ ಪ್ರತಿಯೊಬ್ಬರಲ್ಲಿ ಇರಬೇಕು, ಇದರಿಂದ ಸಂದರ್ಶನ ಸುಲಭವಾಗಿ ಎದುರಿಸಲು ಸಾಧ್ಯವಾಗುತ್ತದೆ. ತಮ್ಮ ಮನೆಯಲ್ಲಿಯೇ ಗ್ರಂಥಾಲಯ ನಿರ್ಮಿಸಿ ಪ್ರತಿನಿತ್ಯವೂ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವ ಮೂಲಕ ಭವಿಷ್ಯದ ಉತ್ತಮ ಶಿಕ್ಷಕರಾಗಿ ಹೊರಹೊಮ್ಮಬೇಕು ಎಂದು ತಿಳಿಸಿದರು.
ವೇದಿಕೆಯಲ್ಲಿ ಇತಿಹಾಸ ವಿಭಾಗದ ಪ್ರಾಧ್ಯಾಪಕ ಡಾ. ಪ್ರಮೋದ್ ಭವಿಷ್ ಘಟಕದ ಸಂಕ್ಷಿಪ್ತ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಭವಿಷ್ ಘಟಕದ ಸಂಯೋಜಕಿ ಕವಿತಾ ಸ್ವಾಗತಿಸಿ, ವಾಣಿಜ್ಯ ಶಾಸ್ತ್ರ ವಿಭಾಗದ ಅಧ್ಯಾಪಕಿ ಅನ್ನಪೂರ್ಣ ವಂದಿಸಿದರು. ವಿದ್ಯಾರ್ಥಿನಿ ಸ್ನೇಹ ಬಿ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ