ನಿಟ್ಟೆಯ ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Upayuktha
0


ನಿಟ್ಟೆ: ಜಿಲ್ಲಾ ರಕ್ತನಿಧಿ ಕೇಂದ್ರ ಉಡುಪಿ, ನಿಟ್ಟೆ ಗಜ್ರಿಯಾ ಆಸ್ಪತ್ರೆ, ರೊಟರಿ ಕ್ಲಬ್ ನಿಟ್ಟೆ ಮತ್ತು ಲಯನ್ಸ ಕ್ಲಬ್ ಹಿರಿಯಡ್ಕ ಇವುಗಳ ಸಂಯುಕ್ತಾಶ್ರಯದಲ್ಲಿ ಅ.5 ಗುರುವಾರದಂದು ನಿಟ್ಟೆಯ ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಘಟಕ, ರೆಡ್ ರಿಬನ್ ಕ್ಲಬ್ ಹಾಗೂ ಯೂತ್ ರೆಡ್ ಕ್ರಾಸ್ ಸೊಸೈಟಿ ಜಂಟಿಯಾಗಿ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿತ್ತು. ಈ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿ, ಅಧ್ಯಾಪಕ-ಅಧ್ಯಾಪಕೇತರ ವರ್ಗದವರಿಂದ ಒಟ್ಟು 165 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.



ಈ ರಕ್ತದಾನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ರಕ್ತನಿಧಿ ಕೇಂದ್ರದ ಅಧಿಕಾರಿ ಹಾಗೂ ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ. ವೀಣಾ ಅವರು ಭಾಗವಹಿಸಿದರು. ಇವರು ಸಭೆಯನ್ನು ಉದ್ದೇಶಿಸಿ ಮಾತನಾಡಿ ರಕ್ತದಾನ ಶಿಬಿರಗಳ ಅಗತ್ಯತೆಗಳ ಬಗ್ಗೆ ತಿಳಿಸಿದರು ಹಾಗೂ ಒಂದು ಯುನಿಟ್ ರಕ್ತದಿಂದ ನಾಲ್ಕು ಜೀವಗಳನ್ನು ಉಳಿಸಬಹುದೆಂದು ಮಾಹಿತಿ ನೀಡಿದರು. ಆರೋಗ್ಯವಂತ ವ್ಯಕ್ತಿಗಳು ಯಾವುದೇ ಹಿಂಜರಿಕೆ ಇಲ್ಲದೆ ರಕ್ತದಾನ ಮಾಡಬೇಕು ಹಾಗೂ ವಿದ್ಯಾರ್ಥಿಗಳು ರಕ್ತದಾನದ ಮೂಲಕ ಸಮಾಜ ಸೇವೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು. 


 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ.ವೀಣಾ ಕುಮಾರಿಯವರು ಮಾತನಾಡಿ ಆರೋಗ್ಯವಂತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು, ಈ ಮೂಲಕ ಸ್ವಸ್ಥ ಸಮಾಜದ ಪಾಲುದಾರರಾಗಬೇಕು ಎಂದು ಕರೆನೀಡಿದರು.



ಸಭೆಯಲ್ಲಿ ನಿಟ್ಟೆ ಗಜ್ರಿಯಾ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶುಭಕರ್ ಅಂಚನ್, ನಿಟ್ಟೆ ರೋಟರಿ ಕ್ಲಬ್ ಅಧ್ಯಕ್ಷರಾದ ಡಾ.ಕೃಷ್ಣಪ್ರಸಾದ್, ಲಯನ್ಸ್ ಕ್ಲಬ್ ಹಿರಿಯಡ್ಕ ಅಧ್ಯಕ್ಷರಾದ ಮೋಹನ್ ದಾಸ್ ಅಚಾರ್ಯ, ಯೂತ್ ರೆಡ್ ಕ್ರಾಸ್ ಸಂಯೋಜಕಿ ರಶ್ಮಿ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಘಟಕಾಧಿಕಾರಿಗಳು ಉಪಸ್ಥಿತರಿದ್ದರು.


ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಕುಮಾರಿ ಶರಣ್ಯ ಪುತ್ರಾಯ ಸ್ವಾಗತಿಸಿದರು, ಕುಮಾರಿ ಸೋನಲ್ ಪ್ರೀತಿ ವಂದಿಸಿದರು, ಕುಮಾರಿ ಸ್ಮೃತಿ ಕಾರ್ಯಕ್ರಮವನ್ನು ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top