ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ : ಅರ್ಜಿ ಆಹ್ವಾನ

Upayuktha
0


ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಫಲಾನುಭವಿ ಆಧಾರಿತ ಯೋಜನೆಗಳಾದ ಹೊಸ ಮೀನು ಕೃಷಿ ಕೊಳಗಳ ನಿರ್ಮಾಣ, ಕಡಲಚಿಪ್ಪು ಕೃಷಿ, ಬ್ಯಾಕ್ ಯಾರ್ಡ್ ಮಿನಿ ಆರ್.ಎ.ಎಸ್ ಘಟಕ ಸ್ಥಾಪನೆ, ರೆಫ್ರಿಜರೇಟೆಡ್ ವಾಹನಗಳ ಖರೀದಿ, ಮೋಟಾರ್ ಸೈಕಲ್‍ನೊಂದಿಗೆ ಐಸ್ ಬಾಕ್ಸ್, ಸಾಂಪ್ರದಾಯಿಕ ಮತ್ತು ಮೋಟಾರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಸುರಕ್ಷತಾ ಕಿಟ್‍ಗಳನ್ನು ಒದಗಿಸಲು ಬೆಂಬಲ ಹಾಗೂ ಸಾಂಪ್ರದಾಯಿಕ ಮೀನುಗಾರರಿಗೆ ದೋಣಿ ಮತ್ತು ಬಲೆ ಒದಗಿಸುವ ಸೌಲಭ್ಯ ಪಡೆಯಲು ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top