ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಭುವನ್‍ರಾಮ್ ಜಗದೀಶ್ ಭಂಡಾರಿ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾರ ಎತ್ತುವ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಗಳಿಸಿಕೊಂಡಿದ್ದಾರೆ.
ಈತ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿದ್ದು, ಭುವನ್ ರಾಮ್ 73 ಕೆಜಿ ವಿಭಾಗದಲ್ಲಿ ಈ ಸಾಧನೆಯನ್ನು ಮಾಡಿದ್ದಾರೆ. ಭುವನ್‍ರಾಮ್ ಪುತ್ತೂರಿನ ಜಗದೀಶ್ ಭಂಡಾರಿ ಹಾಗೂ ನಯನಾ ಭಂಡಾರಿ ಇವರ ಪುತ್ರ.
ಇವರಿಗೆ ಕಾಲೇಜಿನ ದೈಹಿಕಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ಭಾರತೀಯ ಬಾರ್ಡರ್ ಸೆಕ್ಯೂರಿಟಿ ಫೆÇೀರ್ಸ್‍ನ ವಿಶ್ರಾಂತ ಯೋಧ ಹಾಗೂ ರಾಷ್ಟ್ರೀಯ ವೈಟ್‍ಲಿಫ್ಟರ್ ಪುಷ್ಪರಾಜ್ ಭಾರ್ತಿಕುಮೇರು ತರಬೇತಿಯನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ