ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ 2024ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯು ನಡೆಯುತ್ತಿದೆ. ಇದರನ್ವಯ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ದಿಗ್ಗಜ ಕೆಡೆನ್ಸ್ ಸಂಸ್ಥೆಯು ಕಾಲೇಜಿಗೆ ಭೇಟಿ ನೀಡಿತ್ತು. ಸೆಪ್ಟೆಂಬರ್ 30 ಹಾಗೂ ಅಕ್ಟೋಬರ್ 1 ರಂದು ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ 14 ಇಂಜಿನಿಯರಿಂಗ್ ಕಾಲೇಜುಗಳ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ 470 ಅರ್ಹ ವಿದ್ಯಾರ್ಥಿಗಳು ಭಾಗವಹಿಸಿದರು. NMAMIT ನಿಟ್ಟೆ, ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮಂಗಳೂರು, ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ವಾಮಂಜೂರು, SDMIT ಉಜಿರೆ, ಆಳ್ವಾಸ್ ಎಂಜಿನಿಯರಿಂಗ್ ಕಾಲೇಜು ಮೂಡಬಿದ್ರಿ ಹಾಗೂ ಇನ್ನಿತರ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡರು.
ವಾರ್ಷಿಕ 15 ಲಕ್ಷ ರೂಪಾಯಿ ವೇತನ ನೀಡುವ ಹುದ್ದೆಗಳಿಗಾಗಿ ನೇಮಕಾತಿ ನಡೆಯಿತು. ಒಟ್ಟು ಆರು ಸುತ್ತಿನಲ್ಲಿ ಆಯ್ಕೆ ಪ್ರಕ್ರಿಯೆಯು ನಡೆದಿದ್ದು ಅಂತಿಮ ಸುತ್ತಿನ ಪ್ರಕ್ರಿಯೆಯು ಬೆಂಗಳೂರಿನಲ್ಲಿ ನಡೆಯುತ್ತದೆ ಎಂದು ಕಾಲೇಜಿನ ತರಬೇತಿ ಮತ್ತು ನೇಮಕಾತಿ ವಿಭಾಗದ ಮುಖ್ಯಸ್ಥೆ ಪ್ರೊ.ವಂದನಾ ಶಂಕರ್ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ