ಪುತ್ತೂರು: ಶ್ರೀ ರಾಧಾ ಸುರಭಿ ಗೋ ಮಂದಿರ ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಬ್ರಹ್ಮಗಿರಿ ಗೋವಿನ ತೋಟ ಪುದು, ಗೋ ಸೇವಾ ಗತಿವಿಧಿ, ಕರ್ನಾಟಕ ಇದರ ಜಂಟಿ ಆಶ್ರಯದಲ್ಲಿ ದಕ್ಷಿಣಕನ್ನಡ, ಕೊಡಗು, ಉಡುಪಿ, ಹಾಸನ ಜಿಲ್ಲೆಯಲ್ಲಿ ನಡೆಯುತ್ತಿರುವ ಗೋ ಯಾತ್ರೆಯು ಪುತ್ತೂರು ವಿವೇಕಾನಂದ ಮಹಾವಿದ್ಯಾಲಯಕ್ಕೆ ಆಗಮಿಸಿತ್ತು.
ಗೋವಿನ ಉಪಯೋಗ ಗೋಮೂತ್ರ ಗೋ ಹಾಲುಗಳ ಮೂಲಕ ತಯಾರಾಗುವ ಉತ್ಪನ್ನಗಳು ಹಾಗೆ ಅದರಲ್ಲಿರುವ ಔಷಧೀಯ ಗುಣಗಳನ್ನು ತಿಳಿಸಿಕೊಟ್ಟರು. ರಥಯಾತ್ರೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಶ್ರೀ ಭಕ್ತಿ ಭೂಷಣ್‍ದಾಸ್ ಪ್ರಭೂಜೀ ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣುಗಣಪತಿ ಭಟ್, ವಿಶೇಷಅಧಿಕಾರಿಡಾ. ಶ್ರೀಧರ್ ನಾಯಕ್, ಪರೀಕ್ಷಾಂಗ ಕುಲ ಸಚಿವಡಾ. ಶ್ರೀಧರ್ ಎಚ್.ಜಿ ಹಾಗೂ ವಿದ್ಯಾರ್ಥಿಕ್ಷೇಮ ಪಾಲನಾಧಿಕಾರಿ ಡಾ. ಅರುಣ್ ಪ್ರಕಾಶ್, ಉಪನ್ಯಾಸಕರು, ವಿದ್ಯಾರ್ಥಿಗಳು ಗೋಮಾತೆಗೆ ಪೂಜಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ