ಶಿರೂರು: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಘಟಕ ಬೆಂಗಳೂರು ಇವರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಆನ್ಲೈನ್ ಸ್ಪರ್ಧೆಯಲ್ಲಿ ಬಾಗಲಕೋಟ ಜಿಲ್ಲೆಗೆ ಶಿರೂರು ಪಟ್ಟಣದ ಶ್ರೀ ಸಿದ್ದೇಶ್ವರ ಪ್ರೌಢಶಾಲಾ ವಿದ್ಯಾರ್ಥಿನಿ ಕುಮಾರಿ ಮಸ್ಕಾನ ಮುಲ್ಲಾ ಪ್ರಥಮ ಸ್ಥಾನ ಗಳಿಸಿದ್ದಾಳೆ ಎಂದು ಮುಖ್ಯ ಗುರುಮಾತೆ ಶ್ರೀಮತಿ ಎಲ್‌ಟಿ ಪೂಜಾರ ತಿಳಿಸಿದ್ದಾರೆ.
ಸ್ವಾತಂತ್ರ್ಯ ಚಳುವಳಿ ಹಾಗೂ ಸಮಾಜ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ಈ ರಸಪ್ರಶ್ನೆ ಸ್ಪರ್ಧೆಯಲ್ಲಿ 30 ನಿಮಿಷಗಳಲ್ಲಿ 50 ಪ್ರಶ್ನೆಗಳಿಗೆ ಉತ್ತರಿಸಿದವರಿಗೆ ವಿಜೇತರೆಂದು ಆಯ್ಕೆ ಮಾಡಲಾಗುತ್ತದೆ. ಆದರೆ ಕುಮಾರಿ ಮಸ್ಕಾನ್ ಮುಲ್ಲಾ 16 ನಿಮಿಷಗಳಲ್ಲಿ ಬಹು ಆಯಾಯ ಐವತ್ತು ಪ್ರಶ್ನೆಗಳಿಗೆ ಮೊದಲನೇಯವಳಾಗಿ ಉತ್ತರಿಸಿ ಜಿಲ್ಲಾಮಟ್ಟದ ಪ್ರಥಮ 1000 ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರ ಪಡೆದಿದ್ದಾಳೆ ಎಂದು ಕರ್ನಾಟಕ ಜ್ಞಾನ ವಿಕಾಸ ಸಮಿತಿಯ ರಾಜ್ಯ ಕಾರ್ಯದರ್ಶಿಗಳಾದ ಇ. ಬಸವರಾಜ ತಿಳಿಸಿದ್ದಾರೆ.
ಜಿಲ್ಲೆಗೆ ಪ್ರಥಮ ಬಂದ ವಿದ್ಯಾರ್ಥಿನಿಗೆ ಹಾಗೂ ಮಾರ್ಗದರ್ಶನ ಮಾಡಿದ ವಿಜ್ಞಾನ ಶಿಕ್ಷಕರಾದ ಸಂಜಯ್ ನಡುವಿನಮನಿ ಅವರಿಗೆ ಸಂಸ್ಥೆಯ ಅಧ್ಯಕ್ಷರಾದ ಪರಮಪೂಜ್ಯ ಶ್ರೀ ಮರಿ ಮಹಾಂತ ಚನ್ನವೀರ ದೇವರು ಹಾಗೂ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


