ಮಂಗಳೂರು: ರಾಜ್ಯಸಭಾ ಸದಸ್ಯರೂ, ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ವಕ್ತಾರರೂ ಆಗಿರುವ ಡಾ. ಸುಧಾಂಶು ತ್ರಿವೇದಿ ಅವರು ಮಂಗಳೂರಿನ ಡೊಂಗರಕೇರಿಯಲ್ಲಿರುವ ಕೆನರಾ ಪ್ರೌಢಶಾಲೆ ಭೇಟಿ ನೀಡಿ ಸಂಸ್ಥಾಪಕರಾದ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಪುತ್ಥಳಿಗೆ ಹಾರಾರ್ಪಣೆ ಮಾಡಿದರು.
ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಆಡಳಿತ ಮಂಡಳಿಯ ಮಂಗಲ್ಪಾಡಿ ನರೇಶ್ ಶೆಣೈಯವರು ಡಾ. ಸುಧಾಂಶು ತ್ರಿವೇದಿ ಅವರನ್ನು ಸ್ವಾಗತಿಸಿ 135 ವರ್ಷಗಳ ಇತಿಹಾಸ ಹೊಂದಿರುವ ಪ್ರತಿಷ್ಟಿತ ಕೆನರಾ ಶಿಕ್ಷಣ ಸಂಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಣ ಮತ್ತು ಬ್ಯಾಂಕಿಂಗ್ ತಜ್ಞ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಬಗ್ಗೆ ಮಾಹಿತಿ ಪಡೆದುಕೊಂಡ ತ್ರಿವೇದಿಯವರು ಕೆನರಾ ಶಿಕ್ಷಣ ಸಂಸ್ಥೆಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಬಸ್ತಿ ಪುರುಷೋತ್ತಮ ಶೆಣೈ, ಯೋಗೀಶ್ ಕಾಮತ್ ಹಾಗೂ ಗಣ್ಯರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ