ಉಜಿರೆ: ಸ್ನಾತಕೋತ್ತರ ವ್ಯಾಸಂಗ ನಿರತರಾಗಿದ್ದಾಗಲೇ ಆಯೋಜಿಸಲಾಗುವ ವಿವಿಧ ವಿಚಾರ ಸಂಕಿರಣ ಕಾರ್ಯಕ್ರಮಗಳಿಂದ ಸ್ಪೂರ್ತಿದಾಯಕ ವೈಚಾರಿಕ ವಿವೇಚನೆಯನ್ನು ಪಡೆಯಬೇಕು ಎಸ್.ಡಿ.ಎಂ ಕಾಲೇಜಿನ ಆಡಳಿತಾತ್ಮಕ ಕುಲಸಚಿವರಾದ ಡಾ. ಶಲಿಪ್ ಎ. ಪಿ ಅಭಿಪ್ರಾಯಪಟ್ಟರು.
ಅವರು ಉಜಿರೆಯ ಎಸ್. ಡಿ. ಎಂ ಸ್ನಾತಕೋತ್ತರ ಕೇಂದ್ರದ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆ ‘ಸಿನರ್ಜಿ’ಯ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದರು. ಸಮಾಜ ಕಾರ್ಯ ವಿಭಾಗ ತುಂಬಾ ಸಾಂಸ್ಕೃತಿಕವಾಗಿದೆ. ವ್ಯಕ್ತಿತ್ವ ವಿಕಸನ, ವಿಮರ್ಶಾತ್ಮಕ ಚಿಂತನೆ, ಸೃಜನಶೀಲತೆ, ಮತ್ತು ನಾಯಕತ್ವ ಗುಣಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಲು ವಿಚಾರ ಸಂಕಿರಣಗಳು ನೆರವಾಗುತ್ತವೆ. ಇವುಗಳಿಂದ ಸಮಾಜದ ಪರಿವರ್ತನೆಯ ವಿವರಗಳನ್ನು ಅರಿತುಕೊಳ್ಳಬಹುದು ಎಂದು ಹೇಳಿದರು.
ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಜನರನ್ನು ಭೇಟಿಯಾಗಬೇಕು. ಸಮುದಾಯಗಳ ಬೆಳವಣಿಗೆಯ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಅದಕ್ಕೆ ಬೇಕಾದ ಸಂಸ್ಥೆಗಳನ್ನು ಸ್ಥಾಪಿಸಬೇಕು ಎಂದು ಎಸ್. ಡಿ. ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ವಿಶ್ವನಾಥ ಪಿ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಡಾ. ರವಿಶಂಕರ್ ಕೆ. ಆರ್, ಸಹಾಯಕ ಪ್ರಾಧ್ಯಾಪಕಿ ಸ್ವಾತಿ. ಬಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದ್ವಿತೀಯ ಸಮಾಜ ಕಾರ್ಯ ವಿದ್ಯಾರ್ಥಿ ಅಮೃತ್ ನಿರೂಪಿಸಿದರು. ಅನುಷಾ ಸ್ವಾಗತಿಸಿ, ಜಸ್ವಿನ್ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ