ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ವಿವಿಧ ವಿಭಾಗಗಳಲ್ಲಿ ಪ್ರವೇಶಾತಿ ಪಡೆದ ಮೊದಲ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡುವ ಕಾರ್ಯಕ್ರಮವು ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದ ಆಡಿಟೋರಿಯಂನಲ್ಲಿ ಅಕ್ಟೋಬರ್ 4 ಬುಧವಾರದಂದು ನಡೆಯಲಿದೆ.
2023-24 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಕಾಲೇಜಿಗೆ ಆಗಮಿಸಲಿರುವ ಹೊಸ ವಿದ್ಯಾರ್ಥಿಗಳನ್ನು ಕಾಲೇಜು ಎದುರು ನೋಡುತ್ತಿದೆ. ಇಸ್ರೋದ ಅಸೋಸಿಯೇಟ್ ಡೈರೆಕ್ಟರ್ ಡಾ. ಬಿ.ಹೆಚ್.ಎಂ ಧಾರುಕೇಶ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.
ಡಾ. ಬಿ.ಹೆಚ್.ಎಂ ಧಾರುಕೇಶ ಮೂಲತಃ ವಿಜಯನಗರ ಜಿಲ್ಲೆಯವರಾಗಿದ್ದು, ಬಿ.ಎಸ್.ಸಿ ಡಿಗ್ರಿಯನ್ನು ಕೊಟ್ಟೂರಿನಲ್ಲಿ ಪಡೆದಿದ್ದಾರೆ. 1997 ಗುಲ್ಬರ್ಗಾ ವಿಶ್ವವಿದ್ಯಾನಿಲಯದಲ್ಲಿ ಭೌತ ಶಾಸ್ತ್ರದಲ್ಲಿ ಎಂ.ಎಸ್.ಸಿ ಪದವಿಯನ್ನು ಹಾಗೂ ಬೆಂಗಳೂರಿನ ಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್ನಲ್ಲಿ ಡೈರೆಕ್ಟೋರಿಯಲ್ ಡಿಗ್ರಿಯನ್ನೂ ಪಡೆದುಕೊಂಡಿದ್ದಾರೆ.
ಸ್ನಾತಕೋತ್ತರ ಪದವಿಯ ನಂತರ ಇಸ್ರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಆಫ್ ಹಾಗೂ ಮೈಕ್ರೋವೇವ್ ಸರ್ಕ್ಯೂಟ್ ಫಾರ್ ಸ್ಪೇಸ್ ಅಪ್ಲೀಕೇಶನ್ನಲ್ಲಿ ಪರಿಣಿತಿ ಪಡೆದಿದ್ದಾರೆ. ಸದ್ಯ ಬೆಂಗಳೂರಿನ ಇಸ್ರೋದ ಪ್ರಧಾನ ಘಟಕದ ಅಸೋಸಿಯೇಟ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಕಾರ್ಯ ಪರಿಣಿತಿಗೆ ಸ್ಯಾಟಲೈಟ್ ಟೆಕ್ನಾಲಜಿ ಡೇ ಅವಾರ್ಡ್, ಬೆಸ್ಟ್ ಪ್ರೋಸೆಸ್ ಡೆವೆಲೆಪ್ಮೆಂಟ್ ಅವಾರ್ಡ್, ಟೀಮ್ ಎಕ್ಸಲೆನ್ಸ್ ಅವಾರ್ಡ್, ಬೆಸ್ಟ್ ಪೇಪರ್ ಅವಾರ್ಡ್ ಮುಂತಾದ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ