ಉಜಿರೆ: ದೇಶವನ್ನು ಕಟ್ಟುವ ಹೊಣೆಗಾರಿಕೆ ನಮ್ಮೆಲ್ಲರ ಮೇಲೆ ಇದೆ. ನಾವು ಹಕ್ಕುಗಳ ಜೊತೆ ಕರ್ತವ್ಯವನ್ನು ತಿಳಿದುಕೊಳ್ಳಬೇಕು ಎಂದು ನಿವೃತ್ತ ಸಹಾಯಕ ಆಯುಕ್ತ ಕಾವೇರಿಯಪ್ಪ ಕೆ.ಟಿ. ಹೇಳಿದರು.
ಅವರು ಇಂದು (ಅ.11) ಶ್ರೀ ಧ.ಮ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿಯ ವತಿಯಿಂದ ಆಯೋಜಿಸಲಾದ ಭ್ರಷ್ಟಾಚಾರ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ತಮ್ಮ ವೃತ್ತಿ ಜೀವನದ ಅನುಭವಗಳನ್ನು ಹಂಚಿಕೊಳ್ಳುತ್ತಾ ಕಚೇರಿಗಳು ಪಾರದರ್ಶಕತೆಯಿಂದ ಕಾರ್ಯವನ್ನು ನಿರ್ವಹಿಸಿದಾಗ ಮಾತ್ರ ಜನರಿಗೆ ಆಡಳಿತದ ಬಗ್ಗೆ ನಂಬಿಕೆ ಹಾಗೂ ಗೌರವ ಬರುತ್ತದೆ. ಹೀಗಾಗಿ ಮುಂದಿನ ಅಧಿಕಾರಿಗಳಾಗುವ ವಿದ್ಯಾರ್ಥಿಗಳಲ್ಲಿ ಹಂತ ಹಂತವಾಗಿ ಅರಿವು ಮೂಡಿಸಿದಾಗ ಭ್ರಷ್ಟಾಚಾರ ನಿಯಂತ್ರಿಸಲು ಸಾಧ್ಯ ಎಲ್ಲರೂ ಭ್ರಷ್ಟಾಚಾರದ ಸೋಂಕು ಬಾರದ ಹಾಗೆ ನಮ್ಮ ಮೌಲ್ಯಗಳಿಗೆ ಬೇಲಿ ಕಟ್ಟಿಕೊಂಡು ಕಾರ್ಯನಿರ್ವಹಿಸಬೇಕಿದೆ ಎಂದು ಸಭೆಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಧ. ಮ ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ. ಎಸ್. ಎನ್. ಕಾಕ್ತಕರ್ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ವೇಳೆ ಕಾಲೇಜಿನ ವಿದ್ಯಾರ್ಥಿಗಳಿಗೆ ವಾಹನಗಳ ಪಾಸ್ ವಿತರಿಸಲಾಯಿತು.
ಕಾರ್ಯಕ್ರಮದ ಪ್ರಾರ್ಥಮಿಕ ನುಡಿಗಳನ್ನು ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿಯ ಸಂಯೋಜಕ ನಟರಾಜ್ ಹೆಚ್.ಕೆ ನಡೆಸಿಕೊಟ್ಟು, ವಿದ್ಯಾರ್ಥಿನಿ ಮಾನಸ ಅಗ್ನಿಹೋತ್ರಿ ಹಾಗೂ ಹರ್ಷಿತ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ರಿಜಿಸ್ಟರ್ ಡಾ.ಶಲೀಫ್ ಎ.ಪಿ ಹಾಗೂ ಉಪನ್ಯಾಸಕ ಸುಮನ್ ಜೈನ್ ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ