ಮಂಗಳೂರು: ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಂಡ್ ರಿಸರ್ಚ್ ಸೆಂಟರ್ ವತಿಯಿಂದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ ಅಕ್ಟೋಬರ್ 11, 2023ರಂದು ಮುಕ್ಕ ಕ್ಯಾಂಪಸ್‌ನಲ್ಲಿ ನಡೆಯಿತು.
ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಸಹ ಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್ ಮಾತನಾಡಿ, ವೈದ್ಯಕೀಯ ಕ್ಷೇತ್ರದ ಮೂಲಕ ಜನರ ಸೇವೆ ಮಾಡುವುದು ಪುಣ್ಯದ ಕಾರ್ಯ. ಇಂದು ವಿಜ್ಞಾನ ಕ್ಷೇತ್ರ ಮುಂಚೂಣಿಯಲ್ಲಿದ್ದು, ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸ ಸಂಸ್ಥೆಯಲ್ಲಿ ಸುಖಕರವಾಗಿರಲಿ ಎಂದು ಹಾರೈಸಿದರು.
ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಡಾ.ಸಿಎ.ಎ. ರಾಘವೇಂದ್ರ ರಾವ್ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆವಹಿಸಿ, ಸಾಮಾಜಿಕ ಸೇವೆಗೆ ಬಂದಾಗ ವೈದ್ಯಕೀಯ ವಿದ್ಯಾರ್ಥಿಗಳು ಹೊಂದಿರಬೇಕಾದ ಬದ್ಧತೆಯ ಬಗ್ಗೆ ಮಾತನಾಡಿದರು.
ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಂಡ್ ರಿಸರ್ಚ್ ಸೆಂಟರ್ ಮುಂದಿನ ಪೀಳಿಗೆಯ ವೈದ್ಯರು ಮತ್ತು ವೈದ್ಯರನ್ನು ಪೋಷಿಸಲು ಬದ್ಧವಾಗಿದೆ ಎಂದರು.
ಶ್ರೀನಿವಾಸ ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿಯ ಟ್ರಸ್ಟಿ ಸದಸ್ಯೆಯರಾದ ಶ್ರೀಮತಿ ಎ. ವಿಜಯಲಕ್ಷ್ಮಿ ಆರ್. ರಾವ್ ಮತ್ತು ಪ್ರೊ. ಇ ಆರ್., ಎ. ಮಿತ್ರಾ ಎಸ್. ರಾವ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಶ್ರೀನಿವಾಸ ವಿವಿ ರಿಜಿಸ್ಟರ್ ಡಾ. ಅನಿಲ್ ಕುಮಾರ್, ಶ್ರೀನಿವಾಸ ವಿವಿ ಅಭಿವೃದ್ಧಿ ರಿಜಿಸ್ಟರ್ ಡಾ. ಅಜಯ ಕುಮಾರ್ ಉಪಸ್ಥಿತರಿದ್ದರು. ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ರಿಸರ್ಚ್ ಸೆಂಟರ್ ನ ಡೀನ್ ಡಾ. ಉದಯ ಕುಮಾರ್ ಸ್ವಾಗತಿಸಿ, ಶ್ರೀನಿವಾಸ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಡೇವಿಡ್ ಎಂ. ರೊಸಾರಿಯೋ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ