ವೀರಕಂಭ-ಮಜಿ: ಸಮುದಾಯದತ್ತ ಶಾಲೆ ಕಾರ್ಯಕ್ರಮ

Upayuktha
0




ಕಲ್ಲಡ್ಕ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚರ್ಚೆಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು, ತನ್ನ ಶಾಲೆಯ ಬಗ್ಗೆ ಒಳ್ಳಯ ಭಾವನೆ, ಸಂಬಂಧ ಇರಬೇಕು ಆಗ ಮಾತ್ರ ಶೈಕ್ಷಣಿಕವಾಗಿ ಹಾಗೂ ಭೌತಿಕ ಅಭಿವೃದ್ಧಿ ಪಡಿಸಲು ಸಾಧ್ಯಗುತ್ತದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ಹೇಳಿದರು.


ಅವರು ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ, ಇಲ್ಲಿ ನಡೆದ ಸಮುದಾಯದತ್ತ ಕಾರ್ಯಕ್ರಮದ ಶಾಲಾ ಶಿಕ್ಷಕ ರಕ್ಷಕ ಸಭೆಯನ್ನುದ್ದೇಶಿಸಿ ಮಾತನಾಡಿದರು.


ಶಾಲೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಹಾಗೂ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಲು ಪೋಷಕರೊಂದಿಗೆ ಮುಕ್ತವಾಗಿ ಚರ್ಚಿಸಿ ಸಲಹೆ ಅಭಿಪ್ರಾಯವನ್ನು ಪಡೆದು ಸದರಿ ವರ್ಷದ ಡಿಸೆಂಬರ್ ತಿಂಗಳ ಎರಡನೇ ವಾರದಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಆಚರಿಸಲು ಪೋಷಕರ ಒಪ್ಪಿಗೆ ಮೇರೆಗೆ ಶಾಲಾಭಿವೃದ್ಧಿ ಸಮಿತಿಯ ಮೂಲಕ ನಿರ್ಣಯಿಸಲಾಯಿತು.



ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೊರಗಪ್ಪ ನಾಯ್ಕ್ ಸಿಂಗೇರಿ, ಶಾಲಾ ಶಿಕ್ಷಕರುಗಳಾದ ಶಕುಂತಲಾ ಎಂ.ಬಿ, ಸಂಗೀತ ಶರ್ಮಾ ಪಿ.ಜಿ, ಅನುಷಾ, ಮುರ್ಷಿದ ಬಾನು, ಮಮತಾ ಮೊದಲಾದವರು ಉಪಸ್ಥಿತರಿದ್ದು ಪೋಷಕರ ಪ್ರಶ್ನೆಗಳಿಗೆ ಮಾಹಿತಿಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು, ಶಾಲಾಭಿವೃದ್ಧಿಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.



ಶಿಕ್ಷಕಿ ಮಮತಾ ಸ್ವಾಗತಿಸಿ, ಶಿಕ್ಷಕಿ ಮುರ್ಷಿದ ಬಾನು ವಂದಿಸಿ, ಶಿಕ್ಷಕಿ ಸಂಗೀತ ಶರ್ಮ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top