ಸುರತ್ಕಲ್ : ಗೋವಿಂದ ದಾಸ ಕಾಲೇಜಿನ ಗ್ರಂಥಾಲಯದಲ್ಲಿ ಶಾರದಾ ಪೂಜೆಯು ವಿಧಿವತ್ತಾಗಿ ನೆರವೇರಿತು. ಹಿಂದೂ ವಿದ್ಯಾದಾಯಿನೀ ಸಂಘದ ಕಾರ್ಯದರ್ಶಿ ಶ್ರೀರಂಗ ಹೊಸಬೆಟ್ಟು, ಜತೆ ಕಾರ್ಯದರ್ಶಿ ರಾಮಚಂದ್ರ ಮುಕ್ಕ, ಜೊತೆ ಕೋಶಾಧಿಕಾರಿ ರಮೇಶ ಟಿ.ಎಸ್, ಗೋವಿಂದ ದಾಸ ಪದವಿ ಪೂರ್ವ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ವೈ.ವಿ.ರತ್ನಾಕರ ರಾವ್, ಗೋವಿಂದ ದಾಸ ಕಾಲೇಜಿನ ಆಡಳಿತಾತ್ಮಕ ನಿರ್ದೆಶಕ ಪ್ರೊ. ರಮೇಶ ಕುಳಾಯಿ, ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ಕೃಷ್ಣಮೂರ್ತಿ, ಉಪ ಪ್ರ್ರಾಂಶುಪಾಲ ಪ್ರೊ. ರಮೇಶ ಭಟ್, ಗ್ರಂಥಪಾಲೆ ಡಾ. ಸುಜಾತಾ ಬಿ. ಪಿ.ವಿ.ರಾವ್, ಉಪನ್ಯಾಸಕ ವೃಂದದವರು, ಉಪನ್ಯಾಸಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅರ್ಚಕ ಕಟ್ಲ ಕೃಷ್ಣಮೂರ್ತಿ ಪೂಜೆ ನೇರವೇರಿಸಿದರು. ವಿದ್ಯಾರ್ಥಿಗಳಿಂದ ಕುಣಿತ ಭಜನೆ ನೇರವೇರಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ