ಶಶಿ ತರೂರ್ ಆಂಗ್ಲ ಕೃತಿಯ ಕನ್ನಡ ಅವತರಣಿಕೆ `ನಾನು ಯಾಕೆ ಹಿಂದೂ?’- ಅ. 6ರಂದು ಅನಾವರಣ

Upayuktha
0


ಬೆಂಗಳೂರು: ಸಂಸದ, ಚಿಂತಕ, ಬರಹಗಾರ ಶಶಿ ತರೂರ್ ಅವರು ಬರೆದಿರುವ, ವೈ ಐ ಆ್ಯಮ್ ಅ ಹಿಂದೂ? ಆಂಗ್ಲ ಕೃತಿಯನ್ನು ಪ್ರೊ. ಕೆ.ಇ. ರಾಧಾಕೃಷ್ಣ ಅವರು ಕನ್ನಡಕ್ಕೆ ಅನುವಾದಿಸಿರುವ `ನಾನು ಯಾಕೆ ಹಿಂದೂ?’ ಅಕ್ಟೋಬರ್ 6ರಂದು ಸಂಜೆ 4 ಗಂಟೆಗೆ ಬೆಂಗಳೂರು ಲವೆಲಿ ರಸ್ತೆಯ ರೋಟರಿ ಸಭಾಂಗಣದಲ್ಲಿ ನಡೆಯಲಿದೆ.


ಕೃತಿಯನ್ನು ಶಶಿ ತರೂರ್ ಅವರ ತಾಯಿ ಲಿಲಿ ತರೂರ್ ಹಾಗೂ ಭಾರತ ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಾಧೀಶ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅನಾವರಣಗೊಳಿಸಲಿದ್ದಾರೆ. ಕಾನೂನು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ, ವೈದ್ಯಕೀಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮುಖ್ಯ ಅತಿಥಿಯಾಗಿರುವರು. ಸಂಸದ ಮತ್ತು ಲೇಖಕ ಶಶಿ ತರೂರ್ ಉಪಸ್ಥಿತರಿರುವರು. ಕೇಂದ್ರ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಪದ್ಮಶ್ರೀ, ಜ್ಞಾನಪೀಠ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಅಧ್ಯಕ್ಷತೆ ವಹಿಸುವರು. ನಾಡೋಜ ಡಾ. ಹಂಪ ನಾಗರಾಜಯ್ಯ, ನಾಡೋಜ ಕಮಲಾ ಹಂಪನಾ ಹಾಗೂ ಕೃತಿ ಅನುವಾದಕ ಪ್ರೊ. ಕೆ.ಈ. ರಾಧಾಕೃಷ್ಣ ಉಪಸ್ಥಿತರಿರುವರು ಎಂದು ಪುಸ್ತಕ ಬಿಡುಗಡೆ ಸಮಿತಿಯ ಅಧ್ಯಕ್ಷರೂ, ನೇತಾಜಿ ಸುಭಾಶ್ ಚಂದ್ರ ಬೋಸ್ ರೀಸರ್ಚ್ ಟ್ರಸ್ಟ್ ಅಧ್ಯಕ್ಷರೂ ಆಗಿರುವ ಎಂ. ರಾಜ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top