ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಮತ್ತು ಟೂರಿಸಂ 32ನೇ ವರ್ಷದ ಆಹಾರ ಉತ್ಸವ "ಹಾಗ್- 2023" ಅಕ್ಟೋಬರ್ 28, 2023 ರಂದು ಶ್ರೀನಿವಾಸ ವಿವಿ ಸಿಟಿ ಕ್ಯಾಂಪಸ್ ಪಾಂಡೇಶ್ವರದಲ್ಲಿ ಆಯೋಜಿಸಿತು.
ಕಾರ್ಯಕ್ರಮದ ಮುಖ್ಯ ಅತಿಥಿ ಧರ್ಮಗುರು, ಬಿಜೈನ ಲೂರ್ಡ್ಸ್ ಸೆಂಟ್ರಲ್ ಶಾಲೆಯ ಪ್ರಾಂಶುಪಾಲರು ರೆ.ಫಾ. ರಾಬರ್ಟ್ ಡಿಸೋಜ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಮಾನವರಾಗಲು ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿದರು. ಈ ನಿಟ್ಟಿನಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯ ಯಶಸ್ವಿಯಾಗಿದೆ ಎಂದು ಅಭಿನಂದಿಸಿದರು.
ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಡಾ.ಸಿ.ಎ. ಎ. ರಾಘವೇಂದ್ರ ರಾವ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ನಾಲ್ಕು ವರ್ಷಗಳ ವ್ಯಾಸಂಗವನ್ನು ಸದುಪಯೋಗಪಡಿಸಿಕೊಂಡು ವಿಶೇಷ ಕೌಶಲಗಳನ್ನು ರೂಢಿಸಿಕೊಂಡು ಶ್ರಮವಹಿಸಿ, ವ್ಯಕ್ತಿತ್ವ ವಿಕಸನ ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಜೀವನದಲ್ಲಿ ಯಾವುದೇ ಕ್ಷೇತ್ರವನ್ನು ನಿರ್ಲಕ್ಷಿಸಬಾರದು ಎಂದು ಸಲಹೆ ನೀಡಿದರು.
ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಸಹ ಕುಲಾಧಿಪತಿ ಡಾ.ಎ. ಶ್ರೀನಿವಾಸ್ ರಾವ್, ಶ್ರೀನಿವಾಸ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಟ್ರಸ್ಟಿ ಸದಸ್ಯರಾದ ಎ.ವಿಜಯಲಕ್ಷ್ಮಿ ಆರ್.ರಾವ್, ಪ್ರೊ. ಶ್ರೀಮತಿ. ಎ. ಮಿತ್ರ ಎಸ್. ರಾವ್, ಶ್ರೀನಿವಾಸ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ. ಅನಿಲ್ ಕುಮಾರ್, ಶ್ರೀನಿವಾಸ ವಿಶ್ವವಿದ್ಯಾಲಯದ ಅಭಿವೃದ್ಧಿ ರಿಜಿಸ್ಟ್ರರ್ ಡಾ. ಅಜಯ್ ಕುಮಾರ್ ಮತ್ತು ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಅಂಡ್ ಟೂರಿಸಂ ಡೀನ್ ಪ್ರೊ.ಸ್ವಾಮಿನಾಥನ್ ಎಸ್. ಉಪಸ್ಥಿತರಿದ್ದರು.
ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಯಶ್ ರಾಜ್ ಸ್ವಾಗತಿಸಿ, ವೈಭವಿ ಕೋಟ್ಯಾನ್ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ