ಮಂಗಳೂರು: ಟೆಲಿಕಾಂ ರಸ್ತೆಯಲ್ಲಿರುವ ಪೊಲೀಸ್ ಲೈನ್ ಶ್ರೀದೇವಿ ದೇವಸ್ಥಾನದಲ್ಲಿ ಅ.29 ರಂದು ಭಾನುವಾರ ಸಂಜೆ 3 ಗಂಟೆಗೆ ಮಾರ್ನೆಮಿದ ಮಿನದನ ಎಂಬ ನವರಾತ್ರಿಯ ವಿಶೇಷತೆಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಮುಡಿಪುವಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಶೇಷಪ್ಪ ಅಮೀನ್ ಹಾಗೂ ಬೀರಿಯ ಸೈಂಟ್ ಅಲೋಶಿಯಸ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ರಾಕೇಶ್ ಕುಮಾರ್ ರಿಂದ ವಿಶೇಷ ಉಪನ್ಯಾಸವಿದೆ. ಅತಿಥಿಗಳಾಗಿ ಮಯೂರ್ ಉಳ್ಳಾಲ್, ನ್ಯಾಯವಾದಿಗಳಾದ ಕುಶಾಲಪ್ಪ ಕೆ. ಆನಂದ ಸರಿಪಲ್ಲ, ಅಳಪೆ, ಉಮೇಶ್ ಸಾಲಿಯಾನ್ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದ ನಂತರ ನವರಾತ್ರಿಗೆ ಸಂಬಂಧಪಟ್ಟಂತೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶವಿದೆ. ಆಸಕ್ತರು ತಮ್ಮ ಹೆಸರುಗಳನ್ನು ಕೂಟದ ಪ್ರಧಾನ ಕಾರ್ಯದರ್ಶಿ ವರ್ಕಾಡಿ ರವಿ ಅಲೆವೂರಾಯ (94811635 31 ಅಥವಾ alevoorayaravi@gmail.com) ರನ್ನು ಸಂಪರ್ಕಿಸಬಹುದು ಎಂದು ತುಳುಕೂಟದ ಅಧ್ಯಕ್ಷರಾದ ಮರೋಳಿ ಬಿ. ದಾಮೋದರ ನಿಸರ್ಗರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ