ಉಡುಪಿ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ

Upayuktha
0



ಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್, ಡಾ.ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ ಹಾಗೂ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ) ಕೋಟ ಇವರ ಸಹಯೋಗದಲ್ಲಿ ಡಾ. ಶಿವರಾಮ ಕಾರಂತ ಜನ್ಮ ದಿನೋತ್ಸವ ಮತ್ತು ಹುಟ್ಟೂರ ಪ್ರಶಸ್ತಿಗೆ 19 ನೇ ವರ್ಷದ ಸಂಭ್ರಮ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಅಕ್ಟೋಬರ್ 3 ರಿಂದ 10 ರ ವರೆಗೆ ಕೋಟ ಡಾ. ಶಿವರಾಮ ಕಾರಂತ ಥೀಂ ಪಾರ್ಕ್‍ನಲ್ಲಿ ನಡೆಯಲಿದೆ.


ಅ. 3 ರಂದು ಬೆಳಗ್ಗೆ 10.30 ಕ್ಕೆ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಕುಂದಾಪುರ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್, ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಯಶ್‍ಪಾಲ್ ಎ ಸುವರ್ಣ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಮಂಜುನಾಥ ಭಂಡಾರಿ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್, ಕೋಟ ಡಾ. ಕೆ ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
To Top