ಉಡುಪಿ: ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ

Upayuktha
0


ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು, ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಉಡುಪಿ ವತಿಯಿಂದ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಅಕ್ಟೋಬರ್ ತಿಂಗಳ ಕೊನೆಯ ವಾರದಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರನ್ನು ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಮಣಿಪಾ¯ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.


ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು.


18 ರಿಂದ 45 ವರ್ಷದೊಳಗಿನ, ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಆಧಾರ್ ಕಾರ್ಡ್, ಭಾವಚಿತ್ರ, ರೇಶನ್ ಕಾರ್ಡ್, ಆರ್.ಡಿ. ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರದ ಪ್ರತಿಯೊಂದಿಗೆ ತರಬೇತಿಯಲ್ಲಿ ಹಾಜರಾಗಬಹುದಾಗಿದೆ.  


ಹೆಚ್ಚಿನ ಮಾಹಿತಿಗಾಗಿ ಸಿಡಾಕ್ ಕಛೇರಿ, ಒಂದನೇ ಮಹಡಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಅಲೆವೂರು ರೋಡ್, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ : 9844700937 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. 


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top