ಬಾಪೂಜಿ ಪ್ರಬಂಧ ಸ್ಪರ್ಧೆ: ವಿಜೇತರ ವಿವರ

Upayuktha
0


ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 154 ನೇ ಜಯಂತಿ ಅಂಗವಾಗಿ, ವಿದ್ಯಾರ್ಥಿ ಹಾಗೂ ಯುವ ಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪøಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಕುರಿತು ಪ್ರೌಢಶಾಲಾ ವಿಭಾಗ, ಪದವಿ ಪೂರ್ವ ಶಿಕ್ಷಣ ವಿಭಾಗ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಒಟ್ಟು ಮೂರು ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದ್ದು, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿವರ ಇಂತಿವೆ.


ಪ್ರೌಢಶಾಲಾ ವಿಭಾಗ: ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ (ಬೋರ್ಡ್ ಹೈಸ್ಕೂಲ್) 9 ನೇತರಗತಿ ವಿದ್ಯಾರ್ಥಿನಿ ರಕ್ಷಿತಾ ಪ್ರಥಮ, ಕಾರ್ಕಳ ತಾಲೂಕು ಯರ್ಲಪಾಡಿ ಸರಕಾರಿ ಸಂಯುಕ್ತ ಪ್ರೌಢಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ಶ್ರೇಯಾ ದ್ವಿತೀಯ ಹಾಗೂ ಕುಂದಾಪುರ ತಾಲೂಕು ಕೋಟೇಶ್ವರ ಕೆ.ಪಿ.ಎಸ್ ಪ್ರೌಢ ಶಾಲಾ ವಿಭಾಗದ 10 ನೇ ತರಗತಿ ವಿದ್ಯಾರ್ಥಿನಿ ರಶ್ಮಿ ತೃತೀಯ ಸ್ಥಾನ ಪಡೆದಿರುತ್ತಾರೆ.


ಪದವಿ ಪೂರ್ವ ಶಿಕ್ಷಣ ವಿಭಾಗ: ಉಡುಪಿಯ ಎಂ.ಜಿ.ಎಂ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ಕಲಾ ವಿಭಾಗದ ವಿದ್ಯಾರ್ಥಿನಿ ದಿವ್ಯಾ ಪ್ರಥಮ, ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸೌಜನ್ಯ ದ್ವಿತೀಯ ಹಾಗೂ ನಿಟ್ಟೆ ಡಾ. ಎನ್.ಎಸ್.ಎ.ಎಂ. ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ದಕ್ಷಾ ತೃತೀಯ ಸ್ಥಾನ ಪಡೆದಿರುತ್ತಾರೆ.


ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ: ಬಸ್ರೂರು ಶ್ರೀ ಶಾರದಾ ಕಾಲೇಜಿನ ತೃತೀಯ ಬಿ.ಎ ವಿದ್ಯಾರ್ಥಿನಿ ಸ್ವಪ್ನ ಶೇಟ್ ಪ್ರಥಮ, ಶಿರ್ವ ಸಂತ ಮೇರಿ ಕಾಲೇಜಿನ ಹರ್ಷಿತಾ ಯು ಶೆಟ್ಟಿ ದ್ವಿತೀಯ ಹಾಗೂ ಕುಂದಾಪುರ ಕೋಟೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಅನುಷಾ ಕೆ ಪೂಜಾರಿ ತೃತೀಯ ಸ್ಥಾನ ಪಡೆದಿರುತ್ತಾರೆ ಎಂದು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.  


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top