ಉಡುಪಿ: ಕೇಂದ್ರ ಸರ್ಕಾರದ ಉಲ್ಲಾಸ್ ನವ ಭಾರತ ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲಾ ಕಾರಾಗೃಹದಲ್ಲಿನ 8 ಅನಕ್ಷರಸ್ಥರನ್ನು ಗುರುತಿಸಲಾಗಿದೆ.
ಜಿಲ್ಲಾ ಕಾರಾಗೃಹದಲ್ಲಿ ಬುಧವಾರ ನಡೆದ ಅಂತರಾಷ್ಷೀಯ ಸಾಕ್ಷರತಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಕಾರಾಗೃಹದ ಕೈದಿಗಳಿಗೆ ವಯಸ್ಕರ ಶಿಕ್ಷಣ ಇಲಾಖೆಯ ಪಠ್ಯಪುಸ್ತಕ ಬಾಳಿಗೆ ಬೆಳಕು ಮತ್ತು ಬರೆಯುವ ಪುಸ್ತಕ ಸವಿ ಬರಹ ಎಂಬ ಪಠ್ಯಪುಸ್ತಕವನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಯೋಗಾನರಸಿಂಹಸ್ವಾಮಿ .ಕೆ.ಎಂ, ನಿತ್ಯ ಜೀವನದಲ್ಲಿ ಶಿಕ್ಷಣದ ಪಾತ್ರ ಮತ್ತು ಅವಶ್ಯಕತೆಯ ಬಗ್ಗೆ ಖೈದಿಗಳಿಗೆ ತಿಳಿಸಿದರು.
ವಯಸ್ಕರ ಶಿಕ್ಷಣ ಕಾರ್ಯಕ್ರಮ ಸಹಾಯಕಿ ಶ್ವೇತಾ ಮತ್ತು ಜಿಲ್ಲಾ ಕಾರಾಗೃಹ ಅಧೀಕ್ಷರು ಸಿದ್ಧರಾಮ ಪಾಟೀಲ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ