ಉಡುಪಿ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಈ ಕೆಳಕಂಡ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವು-ಜಲಭಾಗ್ಯ ಯೋಜನೆ (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಶೈಕ್ಷಣಿಕ ಸಾಲ ಯೋಜನೆ, ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ ಮತ್ತು ಸ್ವಾವಲಂಬಿ ಸಾರಥಿ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರ್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಕೌಶಲ್ಯ ಕರ್ನಾಟಕ ತಂತ್ರಾಂಶ https://www.kaushalkar.com ರಲ್ಲಿ ಅಕ್ಟೋಬರ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ಸಹಾಯವಾಣಿ 8867537799, ದೂ.ಸಂಖ್ಯೆ: 080-29903994 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ದೂ.ಸಂಖ್ಯೆ: 0820-2574882 ಅಥವಾ ನಿಗಮದ ವೆಬ್‍ಸೈಟ್ https://kmcdc.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ