ಉಡುಪಿ: ಡಿಸೆಂಬರ್ 24-25ರಂದು ಉಡುಪಿಯ ಅಂಬಲಪಾಡಿ ದೇವಸ್ಥಾನದ ಭವಾನಿ ಮಂಟಪದಲ್ಲಿ ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ ಸಂಯೋಜನೆಯಲ್ಲಿ ನಡೆಯುವ ಕರ್ನಾಟಕ ಕರಾವಳಿ ನೃತ್ಯ ಕಲಾವಿದರ ನೃತ್ಯಸಮ್ಮೇಳನ ನೃತ್ಯೋತ್ಕರ್ಷ 2023 ಇದರ ಲಾಂಛನವನ್ನು ಎಲ್ಲಾ ಉಪಸಮಿತಿಗಳ ಸಂಚಾಲಕರ, ಮತ್ತು ಸಮ್ಮೇಳನ ಸಮಿತಿಯ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸ ಲಾಯಿತು. ಸಮಿತಿಯ ಅಧ್ಯಕ್ಷರಾದ ಪಿ. ಕಮಲಾಕ್ಷ ಆಚಾರ್ ರವರು ಲಾಂಛನವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಕಾರ್ಯಾಧ್ಯಕ್ಷ ಯು.ಕೆ. ಪ್ರವೀಣ್, ಉಪಾಧ್ಯಕ್ಷರಾದ ಶ್ರೀ ಚಂದ್ರಶೇಖರ ನಾವಡ, ಶ್ರೀಮತಿ ಶಾರದಾಮಣಿಶೇಖರ್, ಶ್ರೀಮತಿ ರಾಜಶ್ರೀ ಉಲ್ಲಾಳ್, ಕೋಶಾಧ್ಯಕ್ಷರಾದ ಶ್ರೀ ಸುರೇಶ್ ಅತ್ತಾವರ್, ಪ್ರಧಾನ ಕಾರ್ಯದರ್ಶಿಗಳಾದ ಕೆ. ಸುಧೀರ್ ರಾವ್, ಸ್ವಾಗತ ಸಮಿತಿಯ ಸಂಚಾಲಕರಾದ ರಾಮಕೃಷ್ಣ ಕೊಡಂಚ, ಸ್ಮರಣಸಂಚಿಕೆ ಸಮಿತಿಯ ಪ್ರಧಾನ ಸಂಪಾದಕರಾದ ಶ್ರೀಮತಿ ಸುಮಂಗಲಾ ರತ್ನಾಕರ್, ಕಾರ್ಯಕ್ರಮ ಸಂಯೋಜನಾ ಸಮಿತಿಯ ಸದಸ್ಯರಾದ ಶ್ರೀಮತಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಮತಿ ಸೌಮ್ಯ ಸುಧೀಂದ್ರ, ಗಿರೀಶ್ ಪುತ್ತೂರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ