ಉಡುಪಿ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಶೈಕ್ಷಣಿಕ ಸಾಲ ಯೋಜನೆ, ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗ ಸಾಲ ಯೋಜನೆ, ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಒಕ್ಕಲಿಗ ಸಮುದಾಯದ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ, ಗ್ರಾಮಒನ್ http://gramaone.karnataka.gov.in, ಬೆಂಗಳೂರು ಒನ್ https://www.karnatakaone.gov.in ಹಾಗೂ ಕರ್ನಾಟಕ ಒನ್ hಣಣಠಿs://https://k1app.karnatakaone.gov.in ನಲ್ಲಿ ಮತ್ತು ಸ್ವಾತಂತ್ರ ಅಮೃತ ಮುನ್ನಡೆ ಯೋಜನೆಗೆ ಕೌಶಲ್ಯ ಕರ್ನಾಟಕ ತಂತ್ರಾಂಶದ https://www.kaushalkar.com ನಲ್ಲಿ ಅಕ್ಟೋಬರ್ 30 ರ ಒಳಗಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ https://kvcdc.karnataka.gov.in ಅಥವಾ ಇ-ಮೇಲ್ mdkvcdc@gmail.com ಅಥವಾ ದೂ.ಸಂಖ್ಯೆ: 080-29904350, 29904268 ಹಾಗೂ 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ