ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆ: ಅಸಂಘಟಿತ ಕಾರ್ಮಿಕರಿಂದ ಅರ್ಜಿ ಆಹ್ವಾನ

Upayuktha
0



ಉಡುಪಿ: ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢಿಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್‍ನಲ್ಲಿ ನೋಂದಾಯಿಸಲಾಗುತ್ತಿದ್ದು, 2022 ರ ಮಾರ್ಚ್ 31 ರ ಒಳಗೆ ನೋಂದಣಿಯಾಗಿ ಮತ್ತು ಸದರಿ ದಿನಾಂಕದೊಳಗೆ ಅಪಘಾತಗೊಂಡ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ 2 ಲಕ್ಷ ರೂ. ಗಳ ಅಪಘಾತ ಪರಿಹಾರವನ್ನು ಒದಗಿಸಲಾಗುತ್ತಿದ್ದು, ಅರ್ಹ ಅಸಂಘಟಿತ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

 

ಅಪಘಾತದಿಂದ ಮರಣ ಹೊಂದಿದ್ದಲ್ಲಿ ಫಲಾನುಭವಿಯ ಆಧಾರ್ ಸಂಖ್ಯೆ, ಯು.ಎ.ಎನ್ ಕಾರ್ಡ್ (ಇ-ಶ್ರಮ್ ಕಾರ್ಡ್)/ಸಂಖ್ಯೆ, ಮರಣ ಪ್ರಮಾಣ ಪತ್ರ, ಮರಣಕ್ಕೆ ಕಾರಣದ ವೈದ್ಯಕೀಯ ಪ್ರಮಾಣ ಪತ್ರ, ಎಫ್‍ಐಆರ್/ಪಂಚನಾಮವನ್ನು ಹಾಗೂ ಅಪಘಾತದಿಂದ ಅಂಗವೈಕಲ್ಯ ಹೊಂದಿದ್ದಲ್ಲಿ ಫಲಾನುಭವಿಯ ಆಧಾರ್ ಸಂಖ್ಯೆ, ಯು.ಎ.ಎನ್ ಕಾರ್ಡ್(ಇ-ಶ್ರಮ್ ಕಾರ್ಡ್)/ಸಂಖ್ಯೆ, ಅಪಘಾತದಿಂದ ಉಂಟಾದ ಅಂಗವೈಕಲ್ಯವನ್ನು ಸೂಚಿಸುವ ಡಿಸ್ಚಾರ್ಜ್ ಸಾರಾಂಶವನ್ನು ಒಳಗೊಂಡಿರುವ ಆಸ್ಪತ್ರೆಯ ದಾಖಲೆಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಸಬಹುದಾಗಿದೆ. 


ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳ ಕಛೇರಿ, ಉಡುಪಿ ಉಪ ವಿಭಾಗ, ಎ ಬ್ಲಾಕ್, ಮೊದಲನೇ ಮಹಡಿ, ಕೊಠಡಿ ಸಂಖ್ಯೆ:201, ರಜತಾದ್ರಿ, ಮಣಿಪಾಲ, ಉಡುಪಿ ಅನ್ನು ಸಂಪರ್ಕಿಸಿ, ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್.ಬಿ.ಆರ್ ಪ್ರಕಣೆಯಲ್ಲಿ ತಿಳಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top