ಕೋಟ್ಪಾ ದಳದಿಂದ ದಾಳಿ : ದಂಡ ವಸೂಲಿ

Upayuktha
0


ಉಡುಪಿ: ಉಡುಪಿ ತಾಲೂಕಿನಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಶನಿವಾರ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಮಂದಾರ್ತಿ ಪರಿಸರದಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‍ಗಳ ಮೇಲೆ ದಾಳಿ ನಡೆಸಿ ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 22 ಪ್ರಕರಣ ದಾಖಲಿಸಿ 3600 ರೂ. ದಂಡ ವಸೂಲಿ ಮಾಡಲಾಯಿತು.


ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಆರೋಗ್ಯ ನಿರೀಕ್ಷಣಾಧಿಕಾರಿ ರಕ್ಷಿತ್, ಶಿಕ್ಷಣ ಸಂಯೋಜಕ ಪ್ರಕಾಶ್ ಬಿ.ಬಿ, ಬ್ರಹ್ಮಾವರ ಠಾಣೆಯ ಶಾಂಭವಿ, ರಂಜಿತ್.ಡಿ ಹಾಗೂ ಎನ್.ಟಿ.ಸಿ.ಪಿ ವಿಭಾಗದ ಸಾಮಾಜಿಕ ಕಾರ್ಯಕರ್ತೆ ಶೈಲಾ ಶ್ಯಾಮನೂರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top