ಉಡುಪಿ: ಯುವ ರೆಡ್‍ಕ್ರಾಸ್ ಘಟಕ ಉದ್ಘಾಟನೆ

Upayuktha
0


ಉಡುಪಿ: ಸಮಾಜ ಸೇವೆಯ ಒಂದು ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ಉಡುಪಿ ಜಿಲ್ಲಾ ರೆಡ್‍ಕ್ರಾಸ್‍ನ ಗೌರವ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಹೇಳಿದರು. 


ಅವರು ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಮತ್ತು ಮ್ಯಾನೇಜ್ ಮೆಂಟ್‍ನಲ್ಲಿ ಯುವ ರೆಡ್ ಕ್ರಾಸ್ ಘಟಕವನ್ನು ಉದ್ಘಾಟಿಸಿ ಮಾತಾನಾಡುತ್ತಿದ್ದರು. 


ರೆಡ್‍ಕ್ರಾಸ್ ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಕಾಲೇಜುಗಳಲ್ಲಿ ಯುವ ರೆಡ್ ಕ್ರಾಸ್ ಘಟಕಗಳನ್ನು ಪ್ರಾರಂಭಿಸಲಾಗಿದೆ ಎಂದರು. 


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಗುರುಪ್ರಸಾದ್ ರಾವ್ ಮಾತನಾಡಿ, ಕಾಲೇಜಿನಲ್ಲಿ ಯುವರೆಡ್‍ಕ್ರಾಸ್ ಮೂಲಕ ರಕ್ತದಾನ ಶಿಬಿರ, ಪ್ರಥಮ ಚಿಕಿತ್ಸಾ ತರಬೇತಿ ಹಾಗೂ ಅನೇಕ ಆರೋಗ್ಯ ಸಂಬಂಧಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿಕೊಂಡು ಬರಲಾಗಿದೆ ಎಂದರು.


ಕಾರ್ಯಕ್ರಮ ಅಧಿಕಾರಿ ಪ್ರೊ. ಚೇತನಾ ಸುನೀಲ್, ಘಟಕದ ನಾಯಕರಾದ ಅನನ್ಯ ಮತ್ತು ಖುಷಿ ಉಪಸ್ಥಿತರಿದ್ದರು. 


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
To Top