ರೆಡ್‍ಕ್ರಾಸ್ : ತರಬೇತಿ ಕಾರ್ಯಕ್ರಮ

Upayuktha
0


ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ಜಂಟಿ ಸಹಯೋಗದೊಂದಿಗೆ ಅಕ್ಟೋಬರ್ 9 ರಂದು ರೆಡ್‍ಕ್ರಾಸ್ ಭವನದಲ್ಲಿ ಕಾಲೇಜಿನ ರೆಡ್‍ಕ್ರಾಸ್ ಘಟಕದ ನಾಯಕರಾದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಒಂದು ದಿನದ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.


ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ವಿಜಯ ಕುಮಾರ್ ಬಲ್ಲಾಳ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.


ಮಂಗಳೂರು ವಿಶ್ವವಿದ್ಯಾನಿಲಯದ ನೋಡಲ್ ಆಫೀಸರ್ ಡಾ. ಗಾಯತ್ರಿ ಎನ್, ಗೌರವ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ಗೌರವ ಖಚಾಂಚಿ ರಮಾದೇವಿ ಹಾಗೂ ಆಡಳಿತ ಮಂಡಳಿ ಸದಸ್ಯರುಗಳು ಉಪಸ್ಥಿತರಿರುವರು. 


ತರಬೇತಿಯಲ್ಲಿ ರೆಡ್‍ಕ್ರಾಸ್ ಚರಿತ್ರೆ, ಪ್ರಥಮ ಚಿಕಿತ್ಸೆ, ರಕ್ತದಾನದ ಬಗ್ಗೆ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳಾದ ಡಾ. ಕೀರ್ತಿ ಮತ್ತು ವಿರೇಂದ್ರರವರು ನೀಡಲಿದ್ದಾರೆ. 


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
To Top