ದಿವ್ಯಾಂಗರ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಉದ್ಯೋಗ ಶಿಬಿರ ಉದ್ಘಾಟನೆ

Upayuktha
0


ಉಡುಪಿ: ಜಿಲ್ಲಾ ವಿಕಲಚೇತನರ ಸಬಲೀಕರಣ ಇಲಾಖೆ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ ಉಡುಪಿ ಹಾಗೂ ಎಪಿಡಿ ಸಂಸ್ಥೆ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಗರದ ಅಜ್ಜರಕಾಡು ರೆಡ್‍ಕ್ರಾಸ್ ಭವನದಲ್ಲಿ ನಡೆದ ದಿವ್ಯಾಂಗರ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಉದ್ಯೋಗ ಶಿಬಿರ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಉದ್ಘಾಟಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ದಿವ್ಯಾಂಗರಿಗೆ ಸ್ವಾವಲಂಬಿ ಜೀವನಕ್ಕೆ ದಾರಿ ದೀಪವಾಗುವ ಮಾರ್ಗದರ್ಶನ ನೀಡಿ, ರೆಡ್‍ಕ್ರಾಸ್ ಸಂಸ್ಥೆಯ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ವಿವಿಧ ಯೋಜನೆಗಳ ತಿಳಿಸಿದರು. 


ಜಿಲ್ಲಾ ಯೋಜನಾ ಸಂಯೋಜಕ ಹರೀಶ್ ಶೆಟ್ಟಿ ಆಜ್ರಿ, ಪ್ರಾಸ್ತಾವಿಕವಾಗಿ ಮಾತನಾಡಿ, ಕೌಶಲ್ಯಾಭಿವೃದ್ಧಿ ತರಬೇತಿಯ ಉದ್ದೇಶ, ಚಟುವಟಿಕೆಗಳು ಹಾಗೂ ನೇಮಕಾತಿ ಪ್ರಕ್ರಿಯೆ ಬಗ್ಗೆ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಆಕಾಶ ಶೆಟ್ಟಿ ಅಂಪಾರು ಆರ್.ಪಿ.ಡಬ್ಲ್ಯೂ.ಡಿ ಆಕ್ಟ್ 2016 ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಎಪಿಡಿ ಸಂಸ್ಥೆಯ ನಿರ್ದೇಶಕ ಮಹೇಶ್ ಕೆ, ನಿರಂಜನ್ ಟಿ, ಗುಲಪ್ಪ, ಸುಪ್ರೀತಾ, ಶ್ರೀಧರ್, ಜಿಲ್ಲೆಯ ದಿವ್ಯಾಂಗರು, ಉಡುಪಿ ಹಾಗೂ ಕಾರ್ಕಳ ತಾಲೂಕಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.


ಎಪಿಡಿ ಸಂಸ್ಥೆಯ ನೇಮಕಾತಿ ಅಧಿಕಾರಿ ಶ್ರೀಧರ್ ಸ್ವಾಗತಿಸಿ, ಡಿ.ಡಿ.ಆರ್.ಸಿ ನೋಡಲ್ ಅಧಿಕಾರಿ ಜಯಶ್ರೀ ನಿರೂಪಿಸಿ, ಎಪಿಡಿ ಸಂಸ್ಥೆಯ ಕಾರ್ಯಕ್ರಮ ಸಂಯೋಜಕ ಹರೀಶ್ ಶೆಟ್ಟಿ ವಂದಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top