ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಅರಿವು ಕಾರ್ಯಕ್ರಮ

Upayuktha
0


ಉಡುಪಿ: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಕಾರ್ಕಳ ತಾಲೂಕಿನ ಭುವನೇಂದ್ರ ಕಾಲೇಜಿನಲ್ಲಿ ನಡೆದ ಅರಿವು ಕಾರ್ಯಕ್ರಮವನ್ನು  ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಎ ಕೋಟ್ಯಾನ್ ಉದ್ಘಾಟಿಸಿದರು.


ತಾಲೂಕು ಆರೋಗ್ಯಾಧಿಕಾರಿ ಡಾ ಅರುಣಾ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವು ಮುಖ್ಯ ಎಂದರು. 


ಸಂಪನ್ಮೂಲ ವ್ಯಕ್ತಿಯಾಗಿ ಮಾನಸಿಕ ತಜ್ಞೆ ಡಾ.ರಿತಿಕಾ ವಿದ್ಯಾರ್ಥಿಗಳಿಗೆ ಮಾನಸಿಕ ಒತ್ತಡ, ನಿರ್ವಹಣೆ ಬಗ್ಗೆ ಮಾಹಿತಿಯನ್ನು ನೀಡಿದರು. 

 ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್ ಅಂಗಾಂಗದಾನ ನೊಂದಣಿ ಮಾಡುವ ಬಗ್ಗೆ ಪ್ರತಿಜ್ಞಾವಿಧಿ ಭೋದಿಸಿದರು. 

ಎನ್.ಎಸ್.ಎಸ್ ಕೋಆರ್‍ಡಿನೇಟರ್ ಶಂಕರ್ ಕುಡ್ವ ಸ್ವಾಗತಿಸಿ, ಸುವರ್ಣಿ ಎನ್.ಎಸ್.ಎಸ್ ವಂದಿಸಿದರು. 


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Advt Slider:
To Top