ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಮತ್ತು ರೆಡ್‍ಕ್ರಾಸ್ ಸೊಸೈಟಿ ಉಡುಪಿ ಜಿಲ್ಲಾ ಘಟಕ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಎಲ್ಲಾ ಕಾಲೇಜುಗಳ ವೈ.ಆರ್.ಸಿ ಘಟಕಗಳ ಕಾರ್ಯಕ್ರಮ ಅಧಿಕಾರಿಗಳಿಗೆ ಒಂದು ದಿನದ ಯುವ ರೆಡ್‍ಕ್ರಾಸ್ ತರಬೇತಿ ಕಾರ್ಯಕ್ರಮವು ಅಕ್ಟೋಬರ್ 5 ರಂದು ಬೆಳಗ್ಗೆ 10 ಗಂಟೆಗೆ ನಗರದ ಅಜ್ಜರಕಾಡು ರೆಡ್‍ಕ್ರಾಸ್ ಭವನದ ಹೆನ್ರಿ ಡ್ಯುನಂಟ್ ಹಾಲ್‍ನಲ್ಲಿ ನಡೆಯಲಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ರಾಜು ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಬಸ್ರೂರು ರಾಜೀವ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ಪ್ರಾದೇಶಿಕ ವಿಭಾಗದ ಜಂಟಿ ನಿರ್ದೇಶಕ ಡಾ. ರಾಮೇಗೌಡ ಎಂ, ರೆಡ್‍ಕ್ರಾಸ್ ಸಂಸ್ಥೆಯ ಕುಂದಾಪುರ ತಾಲೂಕು ಅಧ್ಯಕ್ಷ ಎಸ್. ಜಯಕರ ಶೆಟ್ಟಿ, ವಿ.ಜಿ. ಶೆಟ್ಟಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


