ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ ವರ್ಗದವರು ಶ್ಲೋಕ, ಭಕ್ತಿಗೀತೆಗಳ ಮೂಲಕ ಜ್ಞಾನ, ಕಲಿಕೆ, ಬುದ್ಧಿವಂತಿಕೆ ಮತ್ತು ಸಂಗೀತದ ದೇವತೆಯಾದ ಶಾರದಾ ದೇವಿಯನ್ನು ಸ್ತುತಿಸಿದರು. ಗ್ರಂಥಾಲಯದ ಮುಂಭಾಗದಲ್ಲಿ ಬಾಳೆಗಿಡಗಳನ್ನು ಕಟ್ಟಿ ಒಳಾಂಗಣ, ಹೊರಾಂಗಣಗಳನ್ನು ತಳಿರುತೋರಣಗಳಿಂದ ಅಲಂಕರಿಸಲಾಗಿತ್ತು. ಕಾಲೇಜು ಹಬ್ಬದ ವಾತಾವರಣದಿಂದ ತುಂಬಿತ್ತು.
ಪೂಜೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ, ಉಪ ಪ್ರಾಂಶುಪಾಲ ಪ್ರೊ. ಶಶಿಶೇಖರ ಎನ್. ಕಾಕತ್ಕರ್, ಆಡಳಿತ ಕುಲಸಚಿವೆ ಡಾ. ಶಲೀಪ್ ಎ.ಪಿ., ಪರೀಕ್ಷಾಂಗ ಕುಲಸಚಿವೆ ಪ್ರೊ. ನಂದಾಕುಮಾರಿ, ವಿವಿಧ ವಿಭಾಗಗಳ ಮುಖ್ಯಸ್ಥರು, ಗ್ರಂಥಪಾಲಕ ಯೋಗೇಶ್ ಎಚ್.ಇ. ಮತ್ತು ಸಿಬ್ಬಂದಿ, ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಸಾದ ವಿತರಣೆ ನಡೆಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ