ಪೆರಿಂಜೆಯಲ್ಲಿ 'ಸಭಾ ಲಕ್ಷಣಮ್' ವಿಶೇಷ ತರಬೇತಿ ಕಾರ್ಯಕ್ರಮ

Upayuktha
0


ಪೆರಿಂಜೆ: ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಜರುಗುತ್ತಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಬೆಳ್ತಂಗಡಿಯ ವಾಣಿ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶಂಕರ್ ರಾವ್ ಅವರು ' ಸಭಾ ಲಕ್ಷಣಂ ' ಎನ್ನುವ ವಿಶೇಷ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು. 


ಹೊಸಂಗಡಿ ಗ್ರಾಮ ಪಂಚಾಯತ್ ಇದರ ಮಾಜಿ ಅಧ್ಯಕ್ಷರಾದ ಹರಿಪ್ರಸಾದ್ ಪಿ. ಅವರು ಅಧ್ಯಕ್ಷತೆ ವಹಿಸಿದ್ದರು ಹಾಗೂ ವಿಶೇಷ ಶಿಬಿರವಾಣಿಯನ್ನು ಅನಾವರಣಗೊಳಿಸಿದರು. ಹೊಸಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ರಹಿಮಾನ್ , ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಅವರು ಉಪಸ್ಥಿತರಿದ್ದರು. 


ಸ್ವಯಂ ಸೇವಕಿ ಡಯಾನ ಸ್ವಾಗತಿಸಿ , ಸಮರ್ಥ್ ವಂದಿಸಿದರು. ಮಹಾಲಕ್ಷ್ಮೀ ನಿರೂಪಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter     

Post a Comment

0 Comments
Post a Comment (0)
To Top